ಸರ್ಕಾರಿ ಧೋರಣೆ ಬಿಟ್ಟು ಕೆಲಸ ಮಾಡಿ ಅಥವಾ ಗಂಟುಮೂಟೆ ಕಟ್ಟಿ: ಬಿಎಸ್‌ಎನ್‌ಎಲ್ ಉದ್ಯೋಗಿಗಳಿಗೆ ಸಚಿವ ವೈಷ್ಣವ್ ಖಡಕ್ ಎಚ್ಚರಿಕೆ
ನವದೆಹಲಿ: ಸಂಕಷ್ಟದಲ್ಲಿರುವ ಟೆಲಿಕಾಂ ಪಿಎಸ್‌ಯುವಾದ ಬಿಎಸ್‌ಎನ್‌ಎಲ್‌ನ ಉದ್ಯೋಗಿಗಳಿಗೆ ಟೆಲಿಕಾಂ ಸಚಿವ ಅಶ್ವಿನಿ ವೈಷ್ಣವ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಉದ್ಯೋಗಿಗಳು ತಮ್ಮ ‘ಸರ್ಕಾರಿ’ ಧೋರಣೆಯನ್ನು ತ್ಯಜಿಸುವಂತೆ ಹೇಳಿದ ಅವರು, ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸದವರಿಗೆ ಕಡ್ಡಾಯ ನಿವೃತ್ತಿ ನೀಡಲಾಗುತ್ತದೆ ಮತ್ತು ಗಂಟು ಮೂಟೆ ಕಟ್ಟಿ ಮನೆಗೆ ಕಳುಹಿಸಲಾಗುತ್ತದೆ ಎಂದಿದ್ದಾರೆ. ಎಂಟಿಎನ್‌ಎಲ್‌ಗೆ ‘ಭವಿಷ್ಯವಿಲ್ಲ’ ಹಾಗಾಗಿ ನಾವು ಅಲ್ಲಿ ಹೆಚ್ಚೇನೂ ಮಾಡಲು ಸಾಧ್ಯವಿಲ್ಲ. ಎಂಟಿಎನ್‌ಎಲ್ ನ ನಿರ್ಬಂಧಗಳು ಮತ್ತು ಅದು ಯಾವ ಸಮಸ್ಯೆಗಳನ್ನು ಎದುರಿಸುತ್ತಿದೆ ಎಂಬುದು ನಮಗೆಲ್ಲರಿಗೂ ತಿಳಿದಿದೆ. ಅದಕ್ಕಾಗಿ ವಿಭಿನ್ನ ಕಸರತ್ತು […]
ಉಡುಪಿ ದೂರಸಂಪರ್ಕ ವಿಭಾಗದಲ್ಲಿ ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ನೌಕರರ ಮುಷ್ಕರ
ಉಡುಪಿ: ಉಡುಪಿ ದೂರಸಂಪರ್ಕ ವಿಭಾಗ (ಕುಂದಾಪುರ, ಉಡುಪಿ, ಕಾರ್ಕಳ) ದಲ್ಲಿ ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ನೌಕರರ ಮೂರು ತಿಂಗಳ ವೇತನ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಬಿಎಸ್‌ಎನ್‌ಎಲ್ ಗುತ್ತಿಗೆ ನೌಕರರ ಒಕ್ಕೂಟದ ನೇತೃತ್ವದಲ್ಲಿ ಗುತ್ತಿಗೆ ನೌಕರರು ಶುಕ್ರವಾರದಿಂದ ಕೆಲಸ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿಯ ಮುಷ್ಕರ ಆರಂಭಿಸಿದರು. ಉಡುಪಿ ಬಿಎಸ್‌ಎನ್‌ಎಲ್ ಕಚೇರಿಯಲ್ಲಿ ದುಡಿಯುತ್ತಿರುವ ಗುತ್ತಿಗೆ ನೌಕರರು ಕೆಲಸ ಸ್ಥಗಿತಗೊಳಿಸಿ ಕಚೇರಿಯ ಮುಂಭಾಗದಲ್ಲಿ ಧರಣಿ ನಡೆಸಿದರು. ಉಡುಪಿ ದೂರು ಸಂಪರ್ಕ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಗುತ್ತಿಗೆ ನೌಕರರಿಗೆ ಅಕ್ಟೋಬರ್‌ನಿಂದ ವೇತನ […]