ಜೂನ್1: ದೇವಸ್ಥಾನ, ಮಸೀದಿ, ಚರ್ಚ್‌ಗಳನ್ನು ತೆರೆಯಲು ಅವಕಾಶ: ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಜೂ.1ರಿಂದ ದೇವಸ್ಥಾನ, ಮಸೀದಿ, ಚರ್ಚ್‌ಗಳನ್ನು ತೆರೆಯಲು ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಅವರು ಮಾಜಿ ಪ್ರಧಾನಿ ಜವಹರಲಾಲ್ ನೆಹರು ಪುಣ್ಯತಿಥಿ ಅಂಗವಾಗಿ ವಿಧಾನಸೌಧದ ಆವರಣದಲ್ಲಿ ನೆಹರು ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ದೇವಸ್ಥಾನಗಳನ್ನು ತೆರೆಯಲು ಅನುಮತಿ ನೀಡಿದರೆ, ಚರ್ಚ್ ಮತ್ತು ಮಸೀದಿಗಳಿಗೂ ಅದೇ ನೀತಿ ಅನ್ವಯ ಆಗುತ್ತದೆ ಎಂದು ತಿಳಿಸಿದರು.

ಮೇ 31ರ ವರೆಗೆ ಕರ್ನಾಟಕ ಪ್ರವೇಶಕ್ಕೆ ಅನ್ಯ ರಾಜ್ಯದ ಜನತೆಗೆ ಅವಕಾಶವಿಲ್ಲ: ಸಿಎಂ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ಗುಜರಾತ್, ಮಹಾರಾಷ್ಟ್ರ, ಕೇರಳ ಮತ್ತು ತಮಿಳುನಾಡಿನಿಂದ ಕರ್ನಾಟಕಕ್ಕೆ ಬರುವ ಜನರಿಗೆ ಮೇ 31 ರವರೆಗೆ ಅವಕಾಶ ನಿರ್ಬಂಧಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.