ಮುಖ್ಯಮಂತ್ರಿ ಯಡಿಯೂರಪ್ಪನವರ ಕೋವಿಡ್ ವರದಿ ನೆಗೆಟಿವ್: ನಾಳೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರ ಕೋವಿಡ್ ವರದಿ ನೆಗೆಟಿವ್ ಬಂದಿದ್ದು, ನಾಳೆ (ಆ.11) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ಕೊರೊನಾ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿಎಂ ಅವರು ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಸಿಎಂ ಆಸ್ಪತ್ರೆಗೆ ದಾಖಲಾಗಿ ನಾಳೆಗೆ ಹತ್ತು ದಿನಗಳು ಆಗಲಿದೆ.‌ ಇದೀಗ ಸಿಎಂ ಸಂಪೂರ್ಣ ಗುಣಮುಖರಾಗಿದ್ದು, ಇಂದು ಬೆಳಿಗ್ಗೆ ಬಂದ ಕೊರೊನಾ ವರದಿಯಲ್ಲಿ ನೆಗೆಟಿವ್ ಬಂದಿದೆ. ಹಾಗಾಗಿ ನಾಳೆ ಸಿಎಂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಆಸ್ಪತ್ರೆಯ ಮೂಲಗಳಿಂದ ತಿಳಿದುಬಂದಿದೆ.