ಪ್ರಾಕೃತಿಕ ವಿಕೋಪ: ಧರ್ಮಸ್ಥಳದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ

ಬೆಳ್ತಂಗಡಿ: ಬೆಳ್ತಂಗಡಿಯ ಶ್ರೀ ಕ್ಷೇತ್ರ ಧರ್ಮಸ್ಥಳದ ಸನ್ನಿಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಾಕೃತಿಕ ವಿಕೋಪ ಪರಿಶೀಲನಾ ಸಭೆ ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭ ಮಾತನಾಡಿದ ಸಿ.ಎಂ. ಯಡಿಯೂರಪ್ಪ ನೆರೆ ಹಾನಿಗೆ ಒಳಗಾದ ಎಲ್ಲರಿಗೂ ಮನೆ ಕಟ್ಟಲು ವ್ಯವಸ್ಥೆ ಮಾಡಲಾಗುವುದು. ತಕ್ಷಣ ಸಂತ್ರಸ್ತರಿಗೆ 10 ಸಾವಿರ ರೂ. ನೀಡಬೇಕು. ಮನೆ ಕಟ್ಟಲು 5 ಲಕ್ಷ ರೂ.‌ ನೀಡುತ್ತೇವೆ. ಇದು ಇಡೀ ರಾಜ್ಯಕ್ಕೆ ಅನ್ವಯವಾಗುತ್ತದೆ ಎಂದರು. ಮನೆಯಲ್ಲಿ ವಾಸ ಮಾಡಲು ಸಾಧ್ಯವಾಗದವರಿಗೆ ಐದು ಸಾವಿರ ಬಾಡಿಗೆ […]