ಬೆಂಗಳೂರು: ನೂತನ ಸಚಿವರಿಗೆ ಇಂದು ಖಾತೆ ಹಂಚಿಕೆ ಖಚಿತ: ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ನೂತನ ಸಚಿವರಿಗೆ ಖಾತೆ ಹಂಚಿಕೆ ಪ್ರಕ್ರಿಯೆ ಭಾನುವಾರ ಪೂರ್ಣವಾಗಲಿದ್ದು, ರಾಜ್ಯಪಾಲರಿಗೆ ಪಟ್ಟಿ ಕಳುಹಿಸಿ ಅನುಮೋದನೆ ಪಡೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಗೃಹ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಅವರು, ನೂತನ ಸಚಿವರಿಗೆ ಯಾವ ಖಾತೆ ಹಂಚಿಕೆ ಮಾಡಬೇಕು ಎಂಬ ಪಟ್ಟಿ ಅಂತಿಮಗೊಳಿಸಲಾಗಿದೆ. ಭಾನುವಾರ ರಾಜ್ಯಪಾಲರಿಗೆ ಕಳುಹಿಸಲಾಗುವುದು. ಶನಿವಾರವೇ ಪಟ್ಟಿಯನ್ನು ರಾಜ್ಯಪಾಲರಿಗೆ ಕಳುಹಿಸಿಕೊಡಲು ನಿರ್ಧರಿಸಲಾಗಿತ್ತು. ಆದರೆ, ಮಾಜಿ ಸಚಿವ ಅರುಣ್ ಜೇಟ್ಲಿ ಅವರ ನಿಧನದ ಹಿನ್ನೆಲೆಯಲ್ಲಿ ಭಾನುವಾರ ಕಳುಹಿಸಿಕೊಡಲು ತೀರ್ಮಾನಿಸಲಾಗಿದೆ ಎಂದರು. ನೂತನ ಸಚಿವರ ಖಾತೆ ಹಂಚಿಕೆಯಲ್ಲಿ ಯಾವುದೇ […]