ರಾಜ್ಯದಲ್ಲಿ ಬಜೆಟ್ ಮಂಡನೆ: ನನ್ನ ಜೀವಮಾನದಲ್ಲೇ ಇಂತಹ ಕಳಪೆ ಬಜೆಟ್ ನೋಡಿಲ್ಲ – ಬಿ.ಎಸ್ ಯಡಿಯೂರಪ್ಪ ಕಿಡಿ
ಬೆಂಗಳೂರು: ರಾಜ್ಯದಲ್ಲಿ 2024-25ನೇ ಸಾಲಿನ ಬಜೆಟ್ ಮಂಡನೆ ಇಂದು ಸಿಎಂ ಸಿದ್ದರಾಮಯ್ಯ ಅವರು ಮಾಡಿದ್ದಾರೆ. ಈ ಕುರಿತು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ‘ಸಿದ್ದರಾಮಯ್ಯನವರು ಕಳಪೆ ಬಜೆಟ್ ಮಂಡಿಸಿದ್ದಾರೆ. ನನ್ನ ಜೀವಮಾನದಲ್ಲೇ ಇಂತಹ ಕಳಪೆ ಬಜೆಟ್ ನೋಡಿಲ್ಲ. ಹದಿನಾಲ್ಕು ಬಜೆಟ್ಗಳನ್ನು ಮಂಡಿಸಿರುವ ಸಿದ್ದರಾಮಯ್ಯರಿಂದ ಇಂತಹ ಕಳಪೆ ಬಜೆಟ್ ನಿರೀಕ್ಷಿಸಿರಲಿಲ್ಲ ಎಂದು ಕಿಡಿಕಾರಿದ್ದಾರೆ. ‘ಈ ಬಾರಿ ಬಜೆಟ್ನ ಬಹುತೇಕ ಅಂಶ ಕೇಂದ್ರ ಸರ್ಕಾರವನ್ನು ದೂರಲು ಮೀಸಲಿಡಲಾಗಿದೆ. ದೆಹಲಿ ಪ್ರತಿಭಟನೆಯ ಮುಂದುವರೆದ ಭಾಗವಾಗಿರುವ ಈ […]
ಬೆಳ್ಳಿತೆರೆ ಮೇಲೆ ಬರಲಿದ್ದಾರೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ: ನೈಜ ಘಟನೆಯಾಧಾರಿತ ಚಲನ ಚಿತ್ರದಲ್ಲಿ ರಾಜಾಹುಲಿ!
ಹೌದು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕನ್ನಡ ಚಿತ್ರಕ್ಕಾಗಿ ಬಣ್ಣ ಹಚ್ಚಿದ್ದಾರೆ. ಕರ್ನಾಟಕದ ರಾಜಾಹುಲಿ ಎಂದೇ ಖ್ಯಾತನಾಮರಾಗಿರುವ, ಮಾಸ್ ಲೀಡರ್ ಬಿ ಎಸ್ ವೈ ನಟಿಸಿರುವ ಆ ಚಿತ್ರದ ಹೆಸರು ‘ತನುಜಾ’. ಈ ಚಿತ್ರದ ಚಿತ್ರೀಕರಣ ಕೂಡ ಶುರುವಾಗಿದ್ದು, ಬಿ ಎಸ್ ವೈ ಶೂಟಿಂಗ್ ನಲ್ಲಿ ಭಾಗಿಯಾಗಿರುವ ಫೋಟೋಗಳು ಹರಿದಾಡುತ್ತಿವೆ. ಇದು ನೈಜ ಘಟನೆ ಆಧಾರಿತ ಸಿನಿಮಾ ಆಗಿದ್ದು, ಕೋವಿಡ್ ಸಮಯದಲ್ಲಿ ನೀಟ್ ಪರೀಕ್ಷೆ ಬರೆಯಲು 350 ಕಿಮೀ ಪ್ರಯಾಣಿಸಿದ ಹುಡುಗಿಯ ರೋಮಾಂಚಕಾರಿ ಕಥೆಯಾಗಿದೆ. ಬಿ […]
ಪ್ರಾಪರ್ಟಿ ಕಾರ್ಡ್ ಸಮಸ್ಯೆ ಪರಿಹಾರಕ್ಕೆ ಸಿಎಂ ಬಿಎಸ್ ವೈ ಅವರೊಂದಿಗೆ ಶಾಸಕ ಕಾಮತ್ ಚರ್ಚೆ
ಮಂಗಳೂರು: ಮಂಗಳೂರಿನಲ್ಲಿ ಕಡ್ಡಾಯವಾಗಿ ಜಾರಿಯಲ್ಲಿರುವ ಪ್ರಾಪರ್ಟಿ ಕಾರ್ಡ್ ಮಾಡಿಸಲು ನಾಗರಿಕರಿಗೆ ಅನೇಕ ತೊಂದರೆಗಳು ಆಗುತ್ತಿರುವುದರಿಂದ ಅದಕ್ಕೆ ಪರಿಹಾರವನ್ನು ಕಂಡುಕೊಳ್ಳುವ ದೃಷ್ಟಿಯಿಂದ ಸೂಕ್ತ ಸೂಚನೆಗಳನ್ನು ನೀಡಬೇಕು ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಲ್ಲಿ ಮನವ ಮಾಡಿದ್ದಾರೆ. ಅಲ್ಲದೇ ಈ ಕುರಿತ ಪರಿಹಾರೋಪಾಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಮಂಗಳೂರು ಸಬ್ ರಿಜಿಸ್ಟಾರ್ ತಾಲೂಕು ಮತ್ತು ನಗರದಲ್ಲಿ ಒಟ್ಟು 1,70,000 ಕ್ಕೂ ಅಧಿಕ ಆಸ್ತಿಗಳಿದ್ದು, ಈಗ ದೊರಕಿರುವ ಮಾಹಿತಿ ಪ್ರಕಾರ 50 […]
ಯಡಿಯೂರಪ್ಪ ಪ್ರಮಾಣವಚನ ದ.ಕ.ಜಿಲ್ಲೆಯ ವಿವಿದೆಡೆ ಸಂಭ್ರಮಾಚರಣೆ
ಮಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಭ್ರಮಾಚರಣೆ ನಡೆಸಲಾಯಿತು. ಮಂಗಳೂರಿನ ಬಿಜೆಪಿ ಕಚೇರಿ ಮುಂಭಾಗದಲ್ಲಿ ನೂರಾರು ಮಂದಿ ಕಾರ್ಯಕರ್ತರು ಭಾಗಿಯಾಗಿ ಸಂಭ್ರಮಿಸಿದರು. ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ ಮುಖಂಡರು, ಕಾರ್ತಕರ್ತರು ಬಿಜೆಪಿಯ ಧ್ವಜ ಹಿಡಿದುಕೊಂಡು ಘೋಷಣೆ ಕೂಗಿದರು. ಈ ವೇಳೆ ಮಾತನಾಡಿದ ಬಿಜೆಪಿ ಮುಖಂಡ ಮೋನಪ್ಪ ಭಂಡಾರಿ, ರಾಜ್ಯದ ಅಪವಿತ್ರ, ಅನಿಷ್ಟ ಮೈತ್ರಿ ಕೊನೆಗೊಂಡಿದೆ. ಯಡಿಯೂರಪ್ಪ ಆಡಳಿತದಲ್ಲಿ ರಾಜ್ಯದಲ್ಲಿ ಮತ್ತೆ ಅಭಿವೃದ್ಧಿ ನಡೆಯಲಿದೆ ಎಂದು ಹೇಳಿದರು. ಹಾಗೆಯೇ […]
ಬಿ.ಎಸ್. ಯಡಿಯೂರಪ್ಪ ಇಂದೇ ಪ್ರಮಾಣವಚನ ಸ್ವೀಕಾರ
ಬೆಂಗಳೂರು: ಹಲವು ದಿನಗಳ ರಾಜಕೀಯ ಕೋಲಹಲಗಳ ಅನಂತರ ಬಿಜೆಪಿಗೆ ಆಡಳಿತ ನಡೆಸುವ ಅವಕಾಶ ದೊರೆತಿದ್ದು, ಹೀಗಾಗಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರವೇ ರಾಜ್ಯದ ಮುಖ್ಯಮಂತ್ರಿಯಾಗಿ 4ನೇ ಬಾರಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆ ಮಾಡಲು ಅವಕಾಶ ನೀಡಲು ಮನವಿ ಮಾಡಿದ್ದಾರೆ. ತಮ್ಮದು ಸಿಂಗಲ್ ಲಾರ್ಜೆಸ್ಟ್ ಪಕ್ಷ ಎಂದು ಹಕ್ಕು ಮಂಡಿಸಿದ್ದಾರೆ. ಕೇಂದ್ರಕ್ಕೆ ತೆರಳಿದ್ದ BJP ನಿಯೋಗಕ್ಕೆ ಬಿಜೆಪಿ ಹೈ ಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ್ದು, ಸಂಜೆ 6.15ರ ಒಳಗೆ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ […]