ಪಬ್ಜಿ ಸಹಿತ 118 ಚೀನಾದ ಆ್ಯಪ್ ಗಳಿಗೆ ನಿಷೇಧ: ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ
ನವದೆಹಲಿ: ಚೀನಾದ ಮೊಬೈಲ್ ಆ್ಯಪ್ ಗಳ ವಿರುದ್ಧ ಕೇಂದ್ರ ಸರ್ಕಾರ ಮತ್ತೊಂದು ಸುತ್ತಿನ ಸಮರ ಸಾರಿದೆ. ಪಬ್ಜಿ, ಪಬ್ಜಿ ಮೊಬೈಲ್ ಲೈಟ್, ವಿಚಾಟ್ ವರ್ಕ್, ವಿಚಾಟ್ ರೀಡಿಂಗ್ ಸೇರಿದಂತೆ 118 ಆ್ಯಪ್‌ಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಈ ಹಿಂದೆ ಎರಡು ಬಾರಿ ಒಟ್ಟು ಚೀನಾದ ನೂರಕ್ಕೂ ಹೆಚ್ಚು ಆ್ಯಪ್‌ಗಳ ಮೇಲೆ ನಿಷೇಧ ಹೇರಲಾಗಿತ್ತು. ದೇಶದ ರಕ್ಷಣೆ, ಸಾರ್ವಭೌಮತ್ವ, ಸಮಗ್ರತೆ, ಭದ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆ ಗಮನದಲ್ಲಿಟ್ಟುಕೊಂಡು 118 ಆ್ಯಪ್‌ಗಳನ್ನು ನಿಷೇಧಿಸಲಾಗಿದೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.