ರಾಜ್ಯ ಬಜೆಟ್ : ಕೃಷಿ, ಮೀನುಗಾರಿಕಾ ಕ್ಷೇತ್ರದ ಅಭಿವೃದ್ಧಿಗೆ ಪೂರಕ
ಬಜೆಟ್ ಅಭಿವೃದ್ಧಿಗೆ ಪೂರಕವಾಗಿದೆ : ಕುಯಿಲಾಡಿ ಸಿಎಂ ಯಡಿಯೂರಪ್ಪನವರು ಗುರುವಾರ ಮಂಡಿಸಿದ ಬಜೆಟ್ ಅಭಿವೃದ್ಧಿಗೆ ಪೂರಕವಾಗಿದ್ದು, ಎಲ್ಲ ವಲಯಗಳಿಗೂ ಆದ್ಯತೆ ನೀಡಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯ್ಕ್ ಅಭಿಪ್ರಾಯಪಟ್ಟಿದ್ದಾರೆ. ಗ್ರಾಮೀಣ ರಸ್ತೆಗಳ ಅಭಿವೃದ್ಧಿ, ಗ್ರಾಮೀಣ ಸುಮಾರ್ಗ ಯೋಜನೆ, ಬಂದರುಗಳ ಅಭಿವೃದ್ಧಿ, ಯುವ ಸಬಲೀಕರಣಕ್ಕೆ ಹೊಸ ಯೋಜನೆ ಮತ್ತು ರಾಜ್ಯದ ಎಲ್ಲಾ ಸಮುದಾಯಗಳ ಏಳಿಗೆಗೆ ಅನುಕೂಲ ಮಾಡಿಕೊಡಲಾಗಿದೆ. ಕೃಷಿ ಸಾಲದ ಬಡ್ಡಿ ಮನ್ನಾ, ನೇಕಾರರ ಸಾಲದ ಬಡ್ಡಿ ಮನ್ನಾ ಮತ್ತು ರಾಜೀವ ಗಾಂಧಿ ವಸತಿ ಯೋಜನೆಗೆ […]