ರಾಜ್ಯದಲ್ಲಿ ಬಜೆಟ್ ಮಂಡನೆ: ನನ್ನ ಜೀವಮಾನದಲ್ಲೇ ಇಂತಹ ಕಳಪೆ ಬಜೆಟ್ ನೋಡಿಲ್ಲ – ಬಿ.ಎಸ್ ಯಡಿಯೂರಪ್ಪ ಕಿಡಿ

ಬೆಂಗಳೂರು: ರಾಜ್ಯದಲ್ಲಿ 2024-25ನೇ ಸಾಲಿನ ಬಜೆಟ್ ಮಂಡನೆ ಇಂದು ಸಿಎಂ ಸಿದ್ದರಾಮಯ್ಯ ಅವರು ಮಾಡಿದ್ದಾರೆ. ಈ ಕುರಿತು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ‘ಸಿದ್ದರಾಮಯ್ಯನವರು ಕಳಪೆ ಬಜೆಟ್ ಮಂಡಿಸಿದ್ದಾರೆ. ನನ್ನ ಜೀವಮಾನದಲ್ಲೇ ಇಂತಹ ಕಳಪೆ ಬಜೆಟ್ ನೋಡಿಲ್ಲ. ಹದಿನಾಲ್ಕು ಬಜೆಟ್ಗಳನ್ನು ಮಂಡಿಸಿರುವ ಸಿದ್ದರಾಮಯ್ಯರಿಂದ ಇಂತಹ ಕಳಪೆ ಬಜೆಟ್ ನಿರೀಕ್ಷಿಸಿರಲಿಲ್ಲ ಎಂದು ಕಿಡಿಕಾರಿದ್ದಾರೆ. ‘ಈ ಬಾರಿ ಬಜೆಟ್ನ ಬಹುತೇಕ ಅಂಶ ಕೇಂದ್ರ ಸರ್ಕಾರವನ್ನು ದೂರಲು ಮೀಸಲಿಡಲಾಗಿದೆ. ದೆಹಲಿ ಪ್ರತಿಭಟನೆಯ ಮುಂದುವರೆದ ಭಾಗವಾಗಿರುವ ಈ […]

ಸಿಐಟಿಯು ವತಿಯಿಂದ ರಾಜ್ಯ ಮತ್ತು ಕೇಂದ್ರ ಸರಕಾರಗಳ ಬಜೆಟ್ ಕುರಿತು ಸಂವಾದ ಕಾರ್ಯಕ್ರಮ

ಉಡುಪಿ ಮತ್ತು ಬ್ರಹ್ಮಾವರ ಸಿಐಟಿಯು ತಾಲೂಕು ಸಮಿತಿಯು ಜಂಟಿ ಆಶ್ರಯದಲ್ಲಿ, ವಿಮಾ ನೌಕರರ ಸಂಘದ ಕಛೇರಿಯಲ್ಲಿ ರಾಜ್ಯ ಮತ್ತು ಕೇಂದ್ರ ಬಜೆಟ್ 2023ರ ಬಗ್ಗೆ ಸಂವಾದ ಕಾರ್ಯಕ್ರಮವು ಫೆ. 28 ರಂದು ನಡೆಯಿತು. ಸಭೆಯ ಅಧ್ಯಕ್ಷ ಸ್ಥಾನವನ್ನು ಸಿಐಟಿಯು ಜಿಲ್ಲಾ ಸಮಿತಿ ಸದಸ್ಯ ಕಾಂ ವಾಮನ ಪೂಜಾರಿ ವಹಿಸಿದ್ದರು. ಉಡುಪಿ ಜಿಲ್ಲೆಯ ಸಿಐಟಿಯುನ ಕಾರ್ಯದರ್ಶಿ ಕಾಂ ಚಂದ್ರಶೇಖರ್ ಮಾತನಾಡಿ, ಬಜೆಟ್ ನಿಂದ ಜನಸಾಮಾನ್ಯರ ಬದುಕಿನ ಮೇಲೆ ಆಗುವಂತಹ ಸಮಸ್ಯೆಗಳ ಬಗ್ಗೆ ವಿವರಿಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರದ […]

ಜನರ ಕಣ್ಣಿಗೆ ಮಣ್ಣೆರಚುವ ತಂತ್ರದ ಬಜೆಟ್ ನಿಂದ ಯಾವುದೇ ಪ್ರಯೋಜನವಿಲ್ಲ: ಕೃಷ್ಣಮೂರ್ತಿ ಆಚಾರ್ಯ

ಉಡುಪಿ: ಶುಕ್ರವಾರದ ಅಧಿವೇಶನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ನಲ್ಲಿ ನಮ್ಮ ಕರಾವಳಿ ಜಿಲ್ಲೆಗಳನ್ನು ಮತ್ತೆ ಕಡೆಗಣಿಸಿದ್ದಾರೆ. ತುಳು ಭಾಷೆಯನ್ನು ಸರ್ಕಾರದ ಮಂತ್ರಿ ಸಭೆಯಲ್ಲಿಯೇ ಅವಮಾನ ಮಾಡಿದಾರೆ. ಅದೇ ರೀತಿ ಅನೇಕ ಸಮುದಾಯಗಳ ಬೇಡಿಕೆಗೆ ಬಜೆಟ್ ನಲ್ಲಿ ಕಿಂಚಿತ್ತೂ ಸ್ಪಂದಿಸುವ ಕೆಲಸ ಮಾಡಿಲ್ಲ. ಅನೇಕ ಸಮುದಾಯಗಳ ಅಭಿವೃದ್ಧಿ ನಿಗಮ ಮಂಡಳಿಗೆ ಅನುದಾನವೂ ಘೋಷಣೆ ಮಾಡಿಲ್ಲ. ಮುಖ್ಯಮಂತ್ರಿಗಳು ಮಂಡಿಸಿದ ಬಜೆಟ್ ಊಟಕ್ಕೆ ಇಲ್ಲದ ಉಪ್ಪಿನಕಾಯಿಯಂತಾಗಿದೆ. ಇದರಿಂದ ಯಾರಿಗೂ ಪ್ರಯೋಜನ ಇಲ್ಲ. ಕಳೆದ ಬಾರಿ ಬಜೆಟ್ ನಲ್ಲಿ […]

ಬಿಲ್ಲವ-ಮೊಗವೀರ ಸಮಾಜವನ್ನು ಸಂಪೂರ್ಣ ಕಡೆಗಣಿಸಿದ ಬಜೆಟ್: ರಮೇಶ್ ಕಾಂಚನ್ ಆಕ್ರೋಶ

ಉಡುಪಿ: ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ಬಿಲ್ಲವರಿಗೆ ಪ್ರತ್ಯೇಕ ನಿಗಮವನ್ನು ಮುಂದಿನ ಬಜೆಟ್ಟಿನಲ್ಲಿ ಘೋಷಣೆ ಮಾಡಿ ಅನುದಾನ ಇಡುವುದಾಗಿ ಹಾಗೂ ಮೀನುಗಾರರಿಗೆ ವಿಶೇಷ ಪ್ಯಾಕೇಜ್ ನೀಡುವುದಾಗಿ ಹೇಳಿ ಪ್ರಚಾರ ಗಿಟ್ಟಿಸಿಕೊಂಡ ಮುಖ್ಯಮಂತ್ರಿ ಬೊಮ್ಮಾಯಿಯವರು ತಮ್ಮ ಬಜೆಟ್ಟಿನಲ್ಲಿ ಬಿಲ್ಲವ ಹಾಗೂ ಮೊಗವೀರ ಸಮುದಾಯವನ್ನು ಸಂಪೂರ್ಣ ಕಡೆಗಣಿಸಿದ್ದಾರೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರಾವಳಿ ಪ್ರದೇಶದಲ್ಲಿ ಬಿಲ್ಲವ ಸಮುದಾಯ ಹಾಗೂ ಮೊಗವೀರ ಸಮುದಾಯವು ಅತೀ ಹೆಚ್ಚು ಪ್ರಾಬಲ್ಯವನ್ನು ಹೊಂದಿದ್ದು ಬಿಲ್ಲವರಿಗೆ […]

ಬೈಂದೂರಿನಲ್ಲಿ ಸೀ ಫುಡ್ ಪಾರ್ಕ್ ಸ್ಥಾಪನೆ: ಗೋವಿಂದ ಬಾಬು ಪೂಜಾರಿ ಅಭಿನಂದನೆ

ಬೈಂದೂರು: ತಾಲೂಕಿನ ಖಂಬದ ಕೋಣೆಯಲ್ಲಿ ಮೀನಿನ ರಫ್ತು ಮತ್ತು ಮೌಲ್ಯವರ್ಧನೆಗೆ ಸೀ ಫುಡ್ ಪಾರ್ಕ್ ಅನ್ನು ಸಾರ್ವಜನಿಕ ಕಾಸಗಿ ಸಹಭಾಗಿತ್ವದಲ್ಲಿ ಸ್ಥಾಪನೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದು, ಕ್ಷೇತ್ರದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಮುಂದಾದ ಸರ್ಕಾರಕ್ಕೆ ಶೆಫ್ ಟಾಕ್ ಫುಡ್ ಹಾಸ್ಪಿಟಾಲಿಟಿ ಸರ್ವಿಸಸ್ ಪ್ರೈ ಲಿ ನ ಸಂಸ್ಥಾಪಕ ಗೋವಿಂದ ಬಾಬು ಪೂಜಾರಿ ಅಭಿನಂದನೆ ಸಲ್ಲಿಸಿದ್ದಾರೆ.