ಜನಪರ ಬಜೆಟ್ ಮಂಡಿಸಿದ ಸರ್ಕಾರಕ್ಕೆ ಮಹಿಳೆಯರ ಪರವಾಗಿ ಅಭಿನಂದನೆ: ನಯನಾ ಗಣೇಶ್

ಉಡುಪಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಂಡಿಸಿರುವ ಬಜೆಟ್ ಮಹಿಳೆಯರ,ರೈತರ,ಎಲ್ಲಾ ವರ್ಗದ ಜನರ ಜನಪರ ಬಜೆಟ್ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಶ್ರೀಮತಿ ನಯನಾ ಗಣೇಶ್ ಹರ್ಷ ವ್ಯಕ್ತಪಡಿಸಿದ್ದಾರೆ. ರೈತರಿಗೆ ನೀಡುತ್ತಿದ್ದ ಬಡ್ಡಿ ರಹಿತ ಸಾಲ 5 ಲಕ್ಷಕ್ಕೆ ಏರಿಕೆ. ಸಣ್ಣ,ಅತೀ ಸಣ್ಣ ರೈತರಿಗೆ 80 ಕೋಟಿ ವೆಚ್ಚದಲ್ಲಿ ಜೀವನ್ ಜ್ಯೋತಿ ಕಿಸಾನ್ ಯೋಜನೆ, ನೇತಾರ ಸಮ್ಮಾನ್ ಯೋಜನೆ 3 ಸಾವಿರದಿಂದ 5 ಸಾವಿರಕ್ಕೆ ಏರಿಕೆ, ನೇಕಾರರು,ಮೀನುಗಾರರಿಗೂ ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ, ಕಾರ್ಮಿಕ ಮಹಿಳೆಯರಿಗೆ ಮಾಸಿಕ 500 […]

ಸದನದಲ್ಲಿ ಹಿಂದಿನ ವರ್ಷದ ಬಜೆಟ್ ಓದಿದ ಅಶೋಕ್ ಗೆಹ್ಲೋಟ್: ಬಜೆಟ್ ಮೊದಲೆ ಸೋರಿಕೆಯಾಗಿದೆಯೆ ಎಂದ ಪ್ರತಿಪಕ್ಷ

ಜೈಪುರ: ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಶುಕ್ರವಾರದಂದು ಸದನದಲ್ಲಿ ಹಳೆ ಬಜೆಟ್ ಅನ್ನು ಏಳು ನಿಮಿಷಗಳ ಕಾಲ ಓದಿದ್ದು, ಆ ಬಳಿಕ ಮುಖ್ಯ ಸಚೇತಕ ಅವರನ್ನು ಎಚ್ಚರಿಸಿದ್ದು, ತಪ್ಪಿನ ಅರಿವಾಗಿ ಸದನದ ಕ್ಷಮೆ ಕೇಳಿದ್ದಾರೆ. ಗೆಹ್ಲೋಟ್ ಸರಕಾರದಿಂದ ಪ್ರಮಾದವಾಗಿದೆ, ಬಜೆಟ್ ಕೂಡಾ ಇತರ ಪೇಪರ್ ಗಳಂತೆ ಮೊದಲೇ ಸೋರಿಕೆ ಆಗಿದೆ ಎಂದು ಪ್ರತಿಪಕ್ಷಗಳು ಸರಕಾರವನ್ನು ಮುಜುಗರಕ್ಕೆ ಸಿಲುಕಿವೆ ಮಾತ್ರವಲ್ಲ, ಸದನದಲ್ಲಿ ಗದ್ದಲ ಸೃಷ್ಟಿಸಿವಿಧಾನಸಭೆಯ ಬಾವಿಯಲ್ಲಿ ಕುಳಿತು ಸದನವನ್ನು 30 ನಿಮಿಷಗಳ ಕಾಲ ಮುಂದೂಡುವಂತೆ ಮಾಡಿದೆ. ಈ […]

ನಾಳೆ ನಗರಸಭೆ ಬಜೆಟ್ ತಯಾರಿ ಬಗ್ಗೆ ಪೂರ್ವಭಾವಿ ಸಭೆ

ಉಡುಪಿ: ಉಡುಪಿ ನಗರಸಭೆಯ 2023-24 ನೇ ಸಾಲಿನ ಬಜೆಟ್ ತಯಾರಿಯ ಬಗ್ಗೆ ನಗರಸಭಾ ವ್ಯಾಪ್ತಿಯಲ್ಲಿ ಕೈಗೊಳ್ಳಬಹುದಾದ ಅವಶ್ಯಕ ಅಭಿವೃದ್ಧಿ ಕೆಲಸ ಕಾರ್ಯಗಳ ವಿಚಾರ ವಿನಿಮಯಗಳ ಕುರಿತು ಪೂರ್ವಭಾವಿ ಸಾರ್ವಜನಿಕ ಸಮಾಲೋಚನಾ ಸಭೆಯು ಜನವರಿ 24 ರಂದು ಮಧ್ಯಾಹ್ನ 3.30 ಕ್ಕೆ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ನಗರಸಭೆ ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.

ಈ ತಿಂಗಳಲ್ಲಿ ಸರ್ಕಾರಿ ನೌಕರರಿಗೆ ಮೋದಿ ಸರ್ಕಾರದಿಂದ ಗುಡ್ ನ್ಯೂಸ್

ನವದೆಹಲಿ: ಕೇಂದ್ರ ಸರ್ಕಾರಿ ನೌಕರರ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ಕನಿಷ್ಠ ವೇತನವನ್ನು 18,000ರು ನಿಂದ 26,000 ರು ಗೇರಿಸುವಂತೆ ಬೇಡಿಕೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಇನ್ನೂ ಮನ್ನಣೆ ಸಿಕ್ಕಿಲ್ಲ. ಹೀಗಾಗಿ ಸರ್ಕಾರಿ ನೌಕರರು ತಮ್ಮ ಬೇಡಿಕೆ ಈಡೇರಲು ಇನ್ನಷ್ಟು ಕಾಲ ಕಾಯುವುದು ಅನಿವಾರ್ಯ ಎನ್ನಲಾಗಿತ್ತು. ಆದರೆ, ಸದ್ಯಕ್ಕೆ ತುಟ್ಟಿಭತ್ಯೆ ಹೆಚ್ಚಳದ ಬಗ್ಗೆ ತೀರ್ಮಾನವಾಗಿದ್ದು, ಜುಲೈ ತಿಂಗಳ ಅಂತ್ಯಕ್ಕೆ ಈ ಬಗ್ಗೆ ಅಧಿಕೃತ ಆದೇಶ ನಿರೀಕ್ಷಿಸಬಹುದಾಗಿದೆ. ತುಟ್ಟಿಭತ್ಯೆ ಪ್ರಮಾಣ ಕೂಡಾ ಶೇ.3ರ ಬದಲಿಗೆ ಶೇ 4ಕ್ಕಿಂತ ಅಧಿಕವಾಗುವ ನಿರೀಕ್ಷೆಯಿದೆ […]