ಮಧ್ಯಪ್ರದೇಶ: ಸೇತುವೆಯಿಂದ ಕೆಳಗುರುಳಿದ ಬಸ್: ಕನಿಷ್ಠ 15 ಜನರ ಸಾವು

ಭೋಪಾಲ: ಮಧ್ಯಪ್ರದೇಶದ ಖಾರ್ಗೋನ್‌ನಲ್ಲಿ ಮಂಗಳವಾರ ಬಸ್ ಸೇತುವೆಯಿಂದ ಬಿದ್ದು ಕನಿಷ್ಠ 15 ಜನರು ಸಾವನ್ನಪ್ಪಿದ್ದರೆ, ಸುಮಾರು 25 ಜನರು ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ, ಅಪಘಾತದ ಸಮಯದಲ್ಲಿ ಬಸ್‌ನಲ್ಲಿ 50 ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಇಂದೋರ್‌ಗೆ ತೆರಳುತ್ತಿದ್ದ ಬಸ್ ಸೇತುವೆಯಿಂದ ಸ್ಕಿಡ್ ಆಗಿ ಕೆಳಕ್ಕೆ ಬಿದ್ದಿದೆ. ಜಿಲ್ಲಾಧಿಕಾರಿ ಶಿವರಾಜ್ ಸಿಂಗ್ ವರ್ಮಾ ಅಪಘಾತ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯ ಅವಲೋಕನ ನಡೆಸಿದ್ದಾರೆ. ಮಧ್ಯಪ್ರದೇಶ ಸರ್ಕಾರವು ಮೃತರ ಕುಟುಂಬ ಸದಸ್ಯರಿಗೆ 4 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದೆ. ತೀವ್ರವಾಗಿ ಗಾಯಗೊಂಡವರಿಗೆ […]

ಸೌದಿಯಲ್ಲಿ ಭೀಕರ ಬಸ್ ಅಪಘಾತ: ಮೆಕ್ಕಾಗೆ ತೆರಳುತ್ತಿದ್ದ 20 ಯಾತ್ರಿಕರ ಸಾವು; 29 ಮಂದಿಗೆ ಗಾಯ

ಸೌದಿ ಅರೇಬಿಯಾ: ಅಸಿರ್‌ನಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಕನಿಷ್ಠ 20 ಉಮ್ರಾ ಯಾತ್ರಿಕರು ಸಾವನ್ನಪ್ಪಿದ್ದಾರೆ ಮತ್ತು 29 ಮಂದಿ ಗಾಯಗೊಂಡಿದ್ದಾರೆ. ಬ್ರೇಕ್ ವೈಫಲ್ಯದ ಪರಿಣಾಮವಾಗಿ ಸೇತುವೆಯೊಂದಕ್ಕೆ ಬಸ್ ಡಿಕ್ಕಿ ಹೊಡೆದು, ಮಗುಚುಬಿದ್ದು ಬಸ್ ಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಗಲ್ಫ್ ನ್ಯೂಸ್ ವರದಿ ಮಾಡಿದೆ. #BusAccidentसऊदी अरब में पुल से टकराकर हुई बस दुर्घटना, 20 उमरा तीर्थयात्रियों की मौत और 29 अन्य घायल हो गए हैं #BusAccident #SaudiArabia […]

ಬೆಳ್ತಂಗಡಿ: ಶಾಲಾ ಪ್ರವಾಸದ ಬಸ್ ಹಾಗೂ ಕರ್ನಾಟಕ ರಾಜ್ಯ ಸಾರಿಗೆ ಬಸ್ ಮುಖಾಮುಖಿ; ಇಬ್ಬರಿಗೆ ಗಂಭೀರ ಗಾಯ

ಬೆಳ್ತಂಗಡಿ: ಶಾಲಾ ಮಕ್ಕಳ ಪ್ರವಾಸದ ಬಸ್ ಹಾಗೂ ಕರ್ನಾಟಕ ರಾಜ್ಯ ಸಾರಿಗೆ ಬಸ್ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಿಡ್ಲೆ ಗ್ರಾಮದ ಬೂಡುಜಾಲು ಸಮೀಪ ನಡೆದಿದೆ. ಗಾಯಗೊಂಡವರನ್ನು ಟೂರಿಸ್ಟ್‌ ಬಸ್‌ ಚಾಲಕ ಅಭಿಷೇಕ್‌ ಹಾಗೂ ಬಸ್‌ ಪ್ರಯಾಣಿಕ ದುಗೇಶ್‌ ಎಂದು ಗುರುತಿಸಲಾಗಿದ್ದು ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಂಧನೂರಿನ ಕಾಲೇಜು ವಿದ್ಯಾರ್ಥಿಗಳ ಪ್ರವಾಸದ ಬಸ್‌ ಧರ್ಮಸ್ಥಳ ಕಡೆಗೆ ಪ್ರಯಾಣಿಸುತ್ತಿದ್ದಾಗ ಕೊಕ್ಕಡ ಕಡೆಗೆ ಹೋಗುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ ಡಿಕ್ಕಿ ಹೊಡೆದಿದೆ. ಬಸ್‌ನಲ್ಲಿದ್ದ ಮಕ್ಕಳು ಹಾಗೂ ಪ್ರಯಾಣಿಕರು […]

ಸವಾರರು ಹತ್ತಿಳಿಯುವಾಗ ಅಪಘಾತಕ್ಕೆ ಕಾರಣವಾಗುವ ಬಸ್ ಸಿಬ್ಬಂದಿ ವಿರುದ್ದ ಕಠಿಣ ಕ್ರಮ: ಎಸ್.ಪಿ ಹಾಕೆ ಅಕ್ಷಯ್ ಮಚ್ಚೀಂದ್ರ

ಉಡುಪಿ: ಇತ್ತೀಚಿನ ದಿನಗಳಲ್ಲಿ ಬಸ್ ಹತ್ತುವಾಗ ಮತ್ತು ಇಳಿಯುವಾಗ ಬಸ್ ಚಾಲಕ ಮತ್ತು ನಿರ್ವಾಹಕರ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯತನದ ವರ್ತನೆಯಿಂದಾಗಿ ಅನೇಕರು ಬಸ್ ನ ಚಕ್ರದಡಿಗೆ ಸಿಲುಕಿ ಪ್ರಾಣ ಕಳೆದುಕೊಳ್ಳುತ್ತಿರುವ ನಿದರ್ಶನಗಳು ಹೆಚ್ಚುತ್ತಿವೆ. ಇಂತಹ ಅಪಘಾತಗಳಿಗೆ ನೇರವಾಗಿ ಕಾರಣವಾಗುವ ಬಸ್ ಚಾಲಕ ಹಾಗೂ ನಿರ್ವಾಹಕರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹಾಕೆ ಅಕ್ಷಯ್ ಮಚ್ಚೀಂದ್ರ ತಿಳಿಸಿದ್ದಾರೆ. ಪ್ರಯಾಣಿಕ ಬಸ್‌ಗಳಲ್ಲಿ ಬಸ್ಸಿನ ಚಾಲಕ ಹಾಗೂ ನಿರ್ವಾಹಕರು ನಿರ್ಲಕ್ಷ್ಯದಿಂದ ಪ್ರಯಾಣಿಕರು ಇಳಿಯುವ […]

ಮಂಗಳೂರು: ಖಾಸಗಿ ಬಸ್ ಗಳ ನಡುವೆ ಅಪಘಾತ; ಪ್ರಯಾಣಿಕರು ಅಪಾಯದಿಂದ ಪಾರು

ಮಂಗಳೂರು: ಎರಡು ಖಾಸಗಿ ಬಸ್ ಗಳ ನಡುವೆ ಅಪಘಾತ ಸಂಭವಿಸಿದ ಘಟನೆ ಮಂಗಳೂರು ನಗರದ ಅಂಬೇಡ್ಕರ್ ಸರ್ಕಲ್ ಬಳಿ ಇಂದು ಬೆಳಗ್ಗೆ ನಡೆದಿದೆ. ಅಪಘಾತದಲ್ಲಿ ಎರಡು ಬಸ್ಸುಗಳಿಗೆ ಹಾನಿ ಉಂಟಾಗಿದ್ದು, ಚಾಲಕ ಸೇರಿದಂತೆ ಬಸ್ ‌ನಲ್ಲಿದ್ದ ಪ್ರಯಾಣಿಕರು ಸಣ್ಣ-ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಈ ಅಪಘಾತದಿಂದಾಗಿ ವಾಹನ ಸಂಚಾರದಲ್ಲಿ ಸ್ವಲ್ಪ ಸಮಯ ಅಡಚಣೆ ಉಂಟಾಗಿತ್ತು. ಬಳಿಕ ಸ್ಥಳಕ್ಕೆ ಆಗಮಿಸಿದ ಟ್ರಾಫಿಕ್ ಠಾಣೆ ಪೊಲೀಸರು ಬಸ್ಸುಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.