ನಿರ್ಲಕ್ಷ್ಯತನದಿಂದ ಬಸ್ ಚಲಾಯಿಸಿ ಸಾವು : ಆರೋಪಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ
ಉಡುಪಿ: ಅತೀ ವೇಗ, ನಿರ್ಲಕ್ಷ್ಯತನ ಹಾಗೂ ಅಜಾಗರೂಕತೆಯಿಂದ ಬಸ್ಸನ್ನು ಚಲಾಯಿಸಿ, ಅಪಘಾತಪಡಿಸಿ, ಸಾವಿಗೆ ಕಾರಣವಾದ ಆರೋಪಿಗೆ ನಗರದ ಒಂದನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2017 ಜನವರಿ 09 ರಂದು ಬೆಳಗ್ಗೆ 5.20 ಸುಮಾರಿಗೆ ಉಡುಪಿ ತಾಲೂಕು ಪುತ್ತೂರು ಗ್ರಾಮದ ಸಂತೆಕಟ್ಟೆ ಹೈವೆ ಗ್ಯಾರೇಜ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಭಾಕರ ಎಂಬಾತನು ಕೆನರಾ ಟೂರಿಸ್ಟ್ ಬಸ್ಸನ್ನು ನಿರ್ಲಕ್ಷ್ಯತನದಿಂದ ಚಲಾಯಿಸಿ, ರಸ್ತೆ ಬದಿ ನಿಂತಿದ್ದ ನಾಗರಾಜ ಎಂಬಾತನಿಗೆ ಢಿಕ್ಕಿ ಹೊಡೆದ […]
ಸದ್ಯದಲ್ಲೇ ಕೊಳಚೆ ನೀರಿನಿಂದ ಓಡಲಿವೆ ಕಾರು, ಟ್ರಕ್, ಬಸ್.!
ನವದೆಹಲಿ: ದೇಶದ ಪ್ರಮುಖ ನಗರಗಳಲ್ಲಿ ವಾಯುಮಾಲಿನ್ಯದಿಂದ ವಾತಾವರಣ ದಿನೇ ದಿನೇ ಹದಗೆಡುತ್ತಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಗ್ರೀನ್ ಹೈಡ್ರೋಜನ್ ಬಳಸಿ ಕಾರು, ಟ್ರಕ್ ಮತ್ತು ಬಸ್‌ಗಳನ್ನು ಓಡಿಸುವ ಯೋಜನೆಯನ್ನು ಹಾಕಿಕೊಂಡಿದೆ. ನಗರಗಳ ಕೊಳಚೆ ನೀರು ಮತ್ತು ಘನ ತ್ಯಾಜ್ಯದಿಂದ ಉತ್ಪಾದಿಸಬಹುದಾದ ಗ್ರೀನ್ ಹೈಡ್ರೋಜನ್ ಬಳಸಿ ಬಸ್, ಕಾರು ಮತ್ತು ಟ್ರಕ್‌ಗಳನ್ನು ಓಡಿಸುವ ಯೋಜನೆ ಇದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ. 6ನೇ ರಾಷ್ಟ್ರೀಯ ಹಣಕಾಸು ಶೃಂಗವನ್ನು ಉದ್ದೇಶಿಸಿ ಮಾತನಾಡಿದರು. […]
ಮಂಗಳೂರು: ಖಾಸಗಿ ಬಸ್ಸುಗಳ ಮೇಲೆ ಪುತ್ತೂರು, ವಿಟ್ಲ, ಬಂಟ್ವಾಳದಲ್ಲಿ ಕಲ್ಲು ತೂರಾಟ
ಮಂಗಳೂರು: ಖಾಸಗಿ ಬಸ್ಸುಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಘಟನೆ ಮಂಗಳವಾರ ವಿಟ್ಲ, ಪುತ್ತೂರು, ಬಂಟ್ವಾಳ ಮೊದಲಾದ ಭಾಗದಲ್ಲಿ ನಡೆದಿದೆ. ಪುತ್ತೂರು ಕಡೆಗೆ ತೆರಳುವ ಸೆಲಿನಾ ಹಾಗೂ ಸೇಫ್ ವೇ ಸೇರಿದಂತೆ ಸುಮಾರು 7 ಖಾಸಗಿ ಬಸ್ ಗಳ ಮೇಲೆ ಕಲ್ಲು ತೂರಾಟ ಮಾಡಲಾಗಿದೆ. ಘಟನೆಯಲ್ಲಿ ಬಸ್ ಗಳ ಗಾಜು ಸಂಪೂರ್ಣ ಪುಡಿಯಾಗಿದ್ದು, ಕೆಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಸೋಮವಾರ ಕೇರಳ ಭಾಗದ ಅಡ್ಯನಡ್ಕದಲ್ಲಿ ಗೋ ಸಾಗಾಟಗಾರರ ಮೇಲೆ ಹಲ್ಲೆ ನಡೆಸಿ ಹಣ ಹಾಗೂ ಪಿಕಪ್ […]
ಆಟೋ ರಿಕ್ಷಾ-ಖಾಸಗಿ ಬಸ್ ಢಿಕ್ಕಿ; ತಂದೆ ಮಗನಿಗೆ ಗಾಯ
ಉಡುಪಿ: ಆಟೋ ರಿಕ್ಷಾ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ ತಂದೆ ಮತ್ತು ಮಗ ಗಂಭೀರ ಗಾಯಗೊಂಡ ಘಟನೆ ಉಡುಪಿ ಸಮೀಪದ ಕೊರಂಗ್ರಪಾಡಿ ಎಂಬಲ್ಲಿ ಬುಧವಾರ ಸಂಭವಿಸಿದೆ. ಉಡುಪಿಯಿಂದ ಕಾರ್ಕಳ ಕಡೆ ತೆರಳುತ್ತಿದ್ದ ಖಾಸಗಿ ಬಸ್ಸ್ ಹಾಗೂ ಬುಡ್ನಾರು ನಿವಾಸಿ ರಿಯಾಸ್ ತನ್ನ ಮಗನನ್ನು ವಿಶೇಷ ತರಗತಿಗೆ ಎಮ್‍ಇಟಿ ಉದ್ಯಾವರ ಶಾಲೆಗೆ ತನ್ನದೇ ರಿಕ್ಷಾದಲ್ಲಿ ಕರೆದುಕೊಂಡು ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗನ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಅಪಘಾತದ […]