ಕುಂದಾಪುರದ ಉದ್ಯಮಿ ಮೊಹಮ್ಮದ್ ಗೌಸ್ ನಿಧನ
ಕುಂದಾಪುರ: ಇಲ್ಲಿನ ಶಾಸ್ತ್ರೀ ಸರ್ಕಲ್ ಬಳಿಯ ಪಾದುಕಾಲಯ ಅಂಗಡಿ ಮಾಲಕ, ಕುಂದಾಪುರ ಎಲ್ ಐ ಸಿ ರಸ್ತೆಯ ನಿವಾಸಿ ಮೊಹಮ್ಮದ್ ಗೌಸ್ (74) ಶುಕ್ರವಾರ ಬೆಳಿಗ್ಗೆ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಇವರು ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ. ಇವರ ಅಂತ್ಯಕ್ರಿಯೆ ಸಂಜೆ 5 ಗಂಟೆಗೆ ಕುಂದಾಪುರ ಜಾಮೀಯ ಮಸೀದಿಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.