ನರೇಂದ್ರ ಮೋದಿ ಸರಕಾರ ಜನಪರವಾಗಿ ಕೆಲಸಮಾಡಿದೆ:ಬಿ.ವೈ.ರಾಘವೇಂದ್ರ

ಕುಂದಾಪುರ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಬಡವರ, ಹಿಂದುಳಿದ ವರ್ಗದವರ ಏಳಿಗೆಗೆ ಸಾಕಷ್ಟು ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಿದೆ. ಗರಿಬಿ ಹಠಾವೋ ಎಂಬ ಘೋಷಣೆಯೊಂದಿಗೆ ಕಳೆದ ಸುಮಾರು ೬೦ ವರ್ಷಗಳಿಂದ ಕೇಂದ್ರದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್‌ಗೆ ಬಡತನ ದೂರ ಮಾಡಲು ಸಾಧ್ಯವಾಗಿಲ್ಲ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಹೇಳಿದರು. ಅವರು ಬೈಂದೂರು ವಿಧಾನಸಭಾ ಕ್ಷೇತ್ರದ ಕಂಚುಗೋಡು ಭಗತ್ ನಗರದಲ್ಲಿ ಜರಗಿದ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು. ಆಯುಷ್ಮಾನ್ ಭಾರತ್ ಯೋಜನೆ, ಉಚಿತ ಗ್ಯಾಸ್ […]