ಬೈಂದೂರು: ಉದ್ಯೋಗ ಸಿಗಲಿಲ್ಲವೆಂದು ಯುವತಿ ನೇಣಿಗೆ ಶರಣು
ಬೈಂದೂರು: ಉದ್ಯೋಗ ಸಿಗಲಿಲ್ಲವೆಂದು ನಿರಾಸೆಗೊಂಡಿದ್ದ ಯುವತಿಯೊಬ್ಬಳು ಮೇ.೨೭ ರಂದು ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತಳನ್ನು ಕಲ್ತೋಡು ಗ್ರಾಮದ ಸೀಗೇಡಿ ನಿವಾಸಿ ಪ್ರಮೋದ ಶೆಟ್ಟಿ ಎಂಬವರ ಪುತ್ರಿ ಗೌತಮಿ (22) ಎಂದು ಗುರುತಿಸಲಾಗಿದೆ. ಉಡುಪಿಯ ಖಾಸಗಿ ಕಾಲೇಜಿನಲ್ಲಿ ಎಂಕಾಂ ಮಾಡಿರುವ ಗೌತಮಿ ಬ್ಯಾಂಕ್ ನೇಮಕಾತಿ ಪರೀಕ್ಷೆ ಹಾಗೂ ಇತರೆ ಕಂಪನಿ ನೇಮಕಾತಿಗೆ ಅರ್ಜಿ ಹಾಕಿದ್ದರೂ ಕೆಲಸ ಸಿಕ್ಕಿರಲಿಲ್ಲ. ಇದರಿಂದ ಹತಾಶಳಾದ ಆಕೆ ತನ್ನ ಮನೆಯ ಮೊದಲನೆ ಮಹಡಿಯಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ. ಯುವತಿಯು […]
ಬೈಂದೂರು: ಕಾಂಗ್ರೆಸ್ ಕೈ ಹಿಡಿದ ಕಮಲ ಕಾರ್ಯಕರ್ತರು
ಬೈಂದೂರು: ಕಾಂಗ್ರೆಸ್ ಪಕ್ಷದ ತತ್ವ, ಸಿದ್ದಾಂತಗಳನ್ನು ಒಪ್ಪಿ ಬೈಂದೂರು ವಿಧಾನಸಭಾ ಕ್ಷೇತ್ರದ ಅನೇಕ ಬಿಜೆಪಿ ಮುಖಂಡರು ಕಾಂಗ್ರೆಸ್ ಕುಟುಂಬಕ್ಕೆ ಸೇರ್ಪಡೆಗೊಳ್ಳುತ್ತಿದ್ದು, ಕಳೆದೊಂದು ತಿಂಗಳಿನಿಂದ ನೂರಾರು ಸಂಖ್ಯೆಯಲ್ಲಿ ಬಿಜೆಪಿ ಮುಖಂಡರು ಪಕ್ಷದ ಬಾವುಟಗಳನ್ನು ಹಿಡಿದಿದ್ದಾರೆ. ಕಟ್ ಬೇಲ್ತೂರಿನ ಬಿಜೂರು 3ನೇ ಹಾಗೂ 4ನೇ ವಾರ್ಡ್ ನ ಸಕ್ರಿಯ ಬಿಜೆಪಿಯ ಕಾರ್ಯಕರ್ತರು ಬಿಜೂರು ವಜ್ರದುಂಬಿ ಸಂಸ್ಥೆಯ ಅಧ್ಯಕ್ಷ ರಾಘವೇಂದ್ರ ದೇವಾಡಿಗ ನೇತೃತ್ವದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು. ಸರಳ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಕಾಂಗ್ರೆಸ್ ಪಕ್ಷದ ಬಾವುಟ ನೀಡಿ, ಪಕ್ಷದ […]
ಮರವಂತೆ: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ ಹುದ್ದೆ ಖಾಲಿ
ಮರವಂತೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಬೈಂದೂರು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ವೈದ್ಯಾಧಿಕಾರಿ – 2 ಹುದ್ದೆಗಳಿಗೆ (ಪ.ಜಾತಿ-1, ಸಾ.ಅ-1 ಹುದ್ದೆ) ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಅಥವಾ ನೇರ ನೇಮಕಾತಿ ಆಗುವವರೆಗೆ / ಖಾಯಂ ವೈದ್ಯರು ವರ್ಗಾವಣೆಯಿಂದ ಹುದ್ದೆ ಭರ್ತಿಯಾಗುವವರೆಗೆ ನೇಮಕಾತಿ ಮಾಡಿಕೊಳ್ಳಲು ಎಂ.ಬಿ.ಬಿ.ಎಸ್ ವಿದ್ಯಾರ್ಹತೆ ಹೊಂದಿದ ಅರ್ಹ ವೈದ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 27 […]
ಬೆಂಗಳೂರಿನಲ್ಲಿ ಬೈಂದೂರು ಹುಡುಗರ ಮೇಲೆ ಮಾರಣಾಂತಿಕ ಹಲ್ಲೆ: ಕಠಿಣ ಕ್ರಮಕ್ಕೆ ಒಕ್ಕೊರಲ ಆಗ್ರಹ
ಬೆಂಗಳೂರು: ಹೊಟ್ಟೆಪಾಡಿಗೆಂದು ಊರು ಬಿಟ್ಟು ಪರವೂರು ಸೇರಿ ನಿಯತ್ತಿನಿಂದ ದುಡಿಯುತ್ತಿದ್ದ ಯುವಕರ ಮೇಲೆ ಸಿಗರೇಟಿನ ಹಣ ಕೇಳಿದರೆನ್ನುವ ಕಾರಣಕ್ಕೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಬಗ್ಗೆ ಆಕ್ರೋಶ ವ್ಯಕ್ತವಾಗಿದ್ದು, ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಒಕ್ಕೊರಲ ಆಗ್ರಹ ಕೇಳಿ ಬರುತ್ತಿದೆ. ಬೆಂಗಳೂರಿನ ಕುಂದಲಹಳ್ಳಿ ಎಚ್.ಎ.ಎಲ್ ಸಮೀಪ ಬೇಕರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕುಂದಾಪುರ ಬೈಂದೂರು ಮೂಲದ ನವೀನ್ ಕುಮಾರ್, ಪ್ರಜ್ವಲ್ ಶೆಟ್ಟಿ, ನಿತಿನ್ ಶೆಟ್ಟಿ ಎಂಬುವರ ಮೇಲೆ ಗುರುವಾರದಂದು ಬೆಂಗಳೂರಿನ ಪುಡಿ ರೌಡಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ದೃಶ್ಯಗಳ […]
ಬೈಂದೂರು: ಮಹಿಳೆ ನಾಪತ್ತೆ
ಉಡುಪಿ: ಬೈಂದೂರು ತಾಲೂಕು ಜಡ್ಕಲ್ ಗ್ರಾಮದ ವಾಟೆಗುಂಡಿ ನಿವಾಸಿ ವಿನುತಾ (29) ಎಂಬ ಮಹಿಳೆಯು ನವೆಂಬರ್ 5 ರಂದು ಸಂಜೆ 7 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 4 ಅಡಿ 8 ಇಂಚು ಎತ್ತರ, ಕೋಲು ಮುಖ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-258233, 9480805460, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ:08254-251031, 9480805434 […]