ಅಲೆವೂರು ಉಪಚುನಾವಣೆಯಲ್ಲಿ ಬಿಜೆಪಿ ಜಯ; ಮತದಾರ ಬಿಜೆಪಿ ಪರವೆಂದು ಮತ್ತೊಮ್ಮೆ ಸಾಬೀತು: ಶ್ರೀಕಾಂತ್ ನಾಯಕ್

ಉಡುಪಿ: ಅಲೆವೂರು ಗ್ರಾಮ ಪಂಚಾಯತ್ ಕೊರಂಗ್ರಪಾಡಿ 3ನೇ ವಾರ್ಡಿನ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಶಂಕರ್ ಪಾಲನ್ ಎದುರಾಳಿ ಅಭ್ಯರ್ಥಿಯ ಎದುರು 67 ಮತಗಳಿಂದ ಜಯಗಳಿಸಿದ್ದು, ಮತದಾರರು ಬಿಜೆಪಿ ಪರವಾಗಿದ್ದರೆನ್ನುವುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಕಾಪು ಬಿಜೆಪಿ ಕ್ಷೇತ್ರಾಧ್ಯಕ್ಷ ಶ್ರೀಕಾಂತ್ ನಾಯಕ್ ಹೇಳಿದ್ದಾರೆ. ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು ಹಾಗೂ ನೂರಾರು ಕಾರ್ಯಕರ್ತರು ಮನೆ-ಮನೆಗೆ ಭೇಟಿ ನೀಡಿ ತಮ್ಮ ಅಭ್ಯರ್ಥಿಯನ್ನು ಗೆಲ್ಲಿಸಲು ಶತಪ್ರಯತ್ನ ಮಾಡಿದರೂ ಯಶಸ್ಸು ಸಿಗಲಿಲ್ಲ. […]