ಶಿರಾಡಿ ಘಾಟ್ ನಲ್ಲಿ ಏಕಮುಖ ಸಂಚಾರ: ಬೆಂಗಳೂರು ಕಡೆಗೆ ತೆರಳುವ ವಾಹನಗಳಿಗೆ ತಾತ್ಕಾಲಿಕ ಪರ್ಯಾಯ ಮಾರ್ಗದ ವ್ಯವಸ್ಥೆ
ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಬರುವ ವಾಹನಗಳಿಗೆ ಶಿರಾಡಿ ಘಾಟ್ ಅನ್ನು ಏಕಮುಖ ಮಾರ್ಗವನ್ನಾಗಿ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಬೆಂಗಳೂರಿನಿಂದ ಮಂಗಳೂರಿಗೆ ಸಂಚರಿಸುವ ಮಾರ್ಗವು ಶಿರಾಡಿ ಘಾಟ್ ಮೂಲಕ ಯಥಾವತ್ ಮುಂದುವರಿದರೆ, ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುವ ವಾಹನಗಳು ದೋಣಿಗಲ್ ಬಳಿಯ ಕಪ್ಪಳ್ಳಿ-ಕೆಸಗಾನಹಳ್ಳಿ ಗ್ರಾಮದ ರಸ್ತೆಯಲ್ಲಿ ಸಂಚರಿಸಬೇಕು. ಇದು 2-ಕಿಮೀ ಉದ್ದದ ಮಾರ್ಗವಾಗಿದ್ದು ತಾತ್ಕಾಲಿಕ ಕ್ರಮದ ಭಾಗವಾಗಿ ಪರ್ಯಾಯ ಮಾರ್ಗವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಇನ್ನು 5 ರಿಂದ 6 ದಿನಗಳಲ್ಲಿ ರಸ್ತೆ ಸಿದ್ಧವಾಗಲಿದೆ ಎಂದು ಲೋಕೋಪಯೋಗಿ ಸಚಿವ ಸಿ […]