ಅಕ್ರಮಗಳ ಮೇಲೆ ಹದ್ದಿನ ಕಣ್ಣಿಡುವ ಸಿ-ವಿಜಿಲ್ ಆ್ಯಪ್ ನಿಂದ ಪಾರದರ್ಶಕ ಚುನಾವಣೆಗೆ ಮುನ್ನುಡಿ

ಮುಕ್ತ-ಪಾರದರ್ಶಕ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸುವುದು ಚುನಾವಣಾ ಆಯೋಗದ ಮುಖ್ಯ ಉದ್ದೇಶವಾಗಿದ್ದು, ಈ ಉದ್ದೇಶ ಈಡೇರಿಕೆಗೆ ಚುನಾವಣಾ ಸಮಯದಲ್ಲಿ ನಡೆಯುವ ಹಲವು ಅಕ್ರಮಗಳು ಅಡ್ಡಿಯಾಗುತ್ತವೆ. ಇಂತಹ ಅಕ್ರಮಗಳನ್ನು ತಡೆಯಲು ಹಾಗೂ ಇವುಗಳ ವಿರುದ್ದ ತ್ವರಿತಗತಿಯಲ್ಲಿ ಕಾಲಮಿತಿಯೊಳಗೆ ಕ್ರಮ ಕೈಗೊಳ್ಳಲು ಸಿ-ವಿಜಿಲ್ ಆ್ಯಪ್ ಅನ್ನು ಚುನಾವಣಾ ಆಯೋಗ ಬಿಡುಗಡೆ ಮಾಡಿದೆ. ಚುನಾವಣಾ ಸಮಯದಲ್ಲಿ ಮತದಾರರಿಗೆ ನಿರ್ದಿಷ್ಟ ವ್ಯಕ್ತಿ ಅಥವಾ ಪಕ್ಷಕ್ಕೆ ಮತ ಹಾಕುವಂತೆ ವಿವಿಧ ರೀತಿಯ ಆಮಿಷ ನೀಡಬಹುದಾದ, ಹಣ ವಿತರಣೆ, ಉಡುಗೊರೆಗಳು ಹಾಗೂ ಕೂಪನ್ ವಿತರಣೆ, […]