ಸಿ.ಎ ಅಂತಿಮ ಪರೀಕ್ಷೆಯಲ್ಲಿ ಚರಣ್ ಪಿ ಶೆಟ್ಟಿ ತೇರ್ಗಡೆ

ಉಡುಪಿ: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ ಆಫ್ ಇಂಡಿಯಾ ನಡೆಸಿದ ಸಿ ಎ ಅಂತಿಮ ಪರೀಕ್ಷೆಯಲ್ಲಿ ಚರಣ್ ಪಿ ಶೆಟ್ಟಿ ಇವರು ಉತ್ತೀರ್ಣರಾಗಿದ್ದಾರೆ. ಇವರು ಉಡುಪಿಯ ಸಿಎ ನರಸಿಂಹ ನಾಯಕ್, ನಾಯಕ್ & ಅಸ್ಸೋಸಿಯೇಟ್ಸ್ ನಲ್ಲಿ ಅರ್ಟಿಕಲಶಿಪ್ ಮಾಡಿದ್ದಾರೆ. ಪೂರ್ಣ ಪ್ರಜ್ಞಾ ಸಂಧ್ಯಾ ಕಾಲೇಜಿನಲ್ಲಿ ಬಿಕಾಮ್ ಪದವಿ ಪಡೆದಿರುವ ಇವರು ಕಾಪು ಕಲ್ಯಾ ಮೂಡುಮನೆ ಪ್ರಕಾಶ್ ಶೆಟ್ಟಿ ಹಾಗೂ ರೂಪಾ ಶೆಟ್ಟಿ ಇವರ ಪುತ್ರ.

ಸಿ.ಎ ಫೌಂಡೇಶನ್‌ ಅರ್ಹತಾ ಪರೀಕ್ಷೆ: ಕಾರ್ಕಳದ ಕ್ರಿಯೇಟಿವ್‌ ಕಾಲೇಜಿನ 3 ವಿದ್ಯಾರ್ಥಿಗಳು ತೇರ್ಗಡೆ

ಕಾರ್ಕಳ: ಭಾರತೀಯ ಲೆಕ್ಕ ಪರಿಶೋಧನಾ ಸಂಸ್ಥೆ ನಡೆಸುವ ಸಿ.ಎ ಫೌಂಡೇಶನ್‌ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಅಶ್ವಿತಾ, ಅಮರ್‌.ಎ.ಎಂ ಹಾಗೂ ಅಭಿಷೇಕ್‌ ಲಕ್ಷ್ಮಣ್‌ ನಾಯ್ಕ್‌ ಇವರು ಅರ್ಹತಾ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳು ಪ್ರಥಮ ವರ್ಷದ ಸಿ.ಎ ಫೌಂಡೇಶನ್‌ ಫಲಿತಾಂಶದಲ್ಲಿಯೇ ಅರ್ಹತೆ ಪಡೆದಿರುವುದು ಪ್ರಶಂಸನೀಯ. ಮುಂದಿನ ಸಿ.ಎ ಮತ್ತು ಸಿ.ಎಸ್‌.ಇ.ಇ.ಟಿ ಪರೀಕ್ಷೆಯನ್ನು ಗುರಿಯಾಗಿಟ್ಟುಕೊಂಡು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಾಗುತ್ತಿದೆ. ಅರ್ಹತಾ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಾದ ಅಶ್ವಿತಾ, ಅಮರ್‌ ಎ ಎಂ […]

ಪ್ರಥಮ ಪ್ರಯತ್ನದಲ್ಲೇ ಸಿಎ ಪರೀಕ್ಷೆಯಲ್ಲಿಉತ್ತೀರ್ಣ: ತ್ರಿಶಾ ವಿದ್ಯಾರ್ಥಿಯ ಸಾಧನೆ

ಉಡುಪಿ: ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ಜೂನ್ 2022ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಉಪ್ಪೂರಿನ ರಚಿತ್ ಆರ್ ಶೆಟ್ಟಿ ಪ್ರಥಮ ಪ್ರಯತ್ನದಲ್ಲೇ ಉತ್ತೀರ್ಣರಾಗಿದ್ದಾರೆ. ಉಡುಪಿಯ ಲೆಕ್ಕಪರಿಶೋಧಕರಾದ ದೇವ್ ಆನಂದ್ ಮತ್ತು ಕಂಪೆನಿಯಲ್ಲಿ ಆರ್ಟಿಕಲ್ಶಿಪ್ ಪೂರೈಸಿದ್ದು, ಇವರು ‘ಸಿಎ’ಯ ಎರಡು ಹಂತದ ತರಬೇತಿಯನ್ನು ತ್ರಿಶಾ ಕ್ಲಾಸಸ್ ನಲ್ಲಿ ಹಾಗೂ ಅಂತಿಮ ಹಂತದ ತರಬೇತಿಯನ್ನು ಆನ್ ಲೈನ್ ಮೂಲಕ ಪಡೆದಿರುತ್ತಾರೆ. ಉಡುಪಿಯ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನಲ್ಲಿ ಬಿ.ಕಾಂ ಪದವಿಯನ್ನು ಪೂರೈಸಿರುತ್ತಾರೆ. ಇವರು ಉಪ್ಪೂರಿನ ರತ್ನಾಕರ ಶೆಟ್ಟಿ ಮತ್ತು […]