ಸಿ.ಎ ಫೌಂಡೇಶನ್ ಪರೀಕ್ಷೆ: ಕ್ರಿಯೇಟಿವ್ ಕಾಲೇಜಿನ ದೀಕ್ಷಾಆಚಾರ್ಯ ಹಾಗೂ ಶ್ರಾವ್ಯಾ ಸಿ.ಎಸ್ ಉತ್ತೀರ್ಣ
ಕಾರ್ಕಳ: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ ಆಫ್ ಇಂಡಿಯಾ(ICAI) ಡಿಸೆಂಬರ್ ತಿಂಗಳಿನಲ್ಲಿ ನಡೆಸಿದ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ.ಯು ಕಾಲೇಜಿನ ಹಳೆ ವಿದ್ಯಾರ್ಥಿಗಳಾದ ದೀಕ್ಷಾ ಆಚಾರ್ಯ ಮತ್ತು ಶ್ರಾವ್ಯಾ ಸಿ.ಎಸ್ ಉತ್ತಮ ಅಂಕ ಗಳಿಸಿ ಉತ್ತೀರ್ಣರಾಗಿದ್ದಾರೆ. ಕ್ರಿಯೇಟಿವ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪ್ರಥಮ ಪಿ.ಯು.ಸಿ ಯಿಂದಲೇ ಸಿ.ಎ ಮತ್ತು ಸಿ.ಎಸ್.ಇ.ಇ. ಟಿ ಹಾಗೂ ಬ್ಯಾಂಕಿಂಗ್ ಪರೀಕ್ಷೆಗಳಿಗೆ ತರಬೇತಿಯನ್ನು ನೀಡಲಾಗುತ್ತಿದೆ. ಈ ಹಿಂದೆ ಜೂನ್ ತಿಂಗಳಲ್ಲಿ ನಡೆಸಿದ ಸಿ.ಎ ಫೌಂಡೇಶನ್ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪಿಯು ಕಾಲೇಜಿನ […]
ಸಿಎ ಫೌಂಡೇಶನ್ ಪರೀಕ್ಷೆ ಫಲಿತಾಂಶ: ಶ್ರೀ ವೆಂಕಟರಮಣ ಪದವಿ ಪೂರ್ವಕಾಲೇಜು ವಿದ್ಯಾರ್ಥಿಗಳ ಸಾಧನೆ
ಕುಂದಾಪುರ: 2022ರ ಡಿಸೆಂಬರ್‌ನಲ್ಲಿ ನಡೆದ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ 10 ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಸಿಎ ಇಂಟರ್ಮೀಡಿಯೇಟ್ ಪರೀಕ್ಷೆಗೆ ಅರ್ಹತೆ ಪಡೆದುಕೊಂಡಿದ್ದಾರೆ. ನುರಿತ ಉಪನ್ಯಾಸಕರ ನಿರಂತರ ಬೋಧನೆಯ ಸದುಪಯೋಗವನ್ನು ಪಡೆದುಕೊಂಡು ಶ್ರೇಷ್ಠ ಸಾಧನೆ ಮೆರೆದಿರುವುದು ಶ್ಲಾಘನೀಯ. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ತ್ರಿಶಾ ಕ್ಲಾಸಸ್: ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ
ಮಂಗಳೂರು: ತ್ರಿಶಾ ಕ್ಲಾಸಸ್ ನಲ್ಲಿ ತರಬೇತಿ ಪಡೆದು ಕಳೆದ ಜೂನ್‍ನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮಂಗಳೂರಿನ ತ್ರಿಶಾ ಕಾಲೇಜಿನ ಸಭಾಂಗಣದಲ್ಲಿ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪ್ರೊ. ಜಯ್ ಪ್ರಭುಲಾಲ್ ಶಾ ಅವರು ಯೋಜನೆಯುತವಾದ ಕಲಿಕೆ ಮತ್ತು ಆಸಕ್ತಿ ವಿದ್ಯಾರ್ಥಿಯನ್ನು ತನ್ನ ಗುರಿಯತ್ತ ಸಾಗಲು ಸಹಾಯಮಾಡುತ್ತದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣರಾದ 36 ವಿದ್ಯಾರ್ಥಿಗಳನ್ನು ಪೋಷಕರ ಸಮ್ಮುಖದಲ್ಲಿ ಅಭಿನಂದನಾ […]
ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ತ್ರಿಶಾ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮ
ಉಡುಪಿ: ತ್ರಿಶಾ ಕ್ಲಾಸಸ್ ನಲ್ಲಿ ತರಬೇತಿ ಪಡೆದು ಕಳೆದ ಜೂನ್‍ನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಉಡುಪಿಯ ತ್ರಿಶಾ ವಿದ್ಯಾ ಕಾಲೇಜ್ ನ ಸಭಾಂಗಣದಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ತ್ರಿಶಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಸಿಎ ಗೋಪಾಲಕೃಷ್ಣ ಭಟ್ ಮಾತನಾಡಿ, ಅಧ್ಯಯನಶೀಲನಾದ ವಿದ್ಯಾರ್ಥಿಯೊಬ್ಬನ ಸಾಧನೆಯನ್ನು ಯಾರಿಂದಲೂ ತಡೆಯಲಾಗದು ಎಂದರು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಸಿಎ ಆದರ್ಶ ಶೆಣೈ ಮತ್ತು ಸಿಎ ನಾಗೇಂದ್ರ ಭಕ್ತ ಭಾಗವಹಿಸಿದ್ದರು. ಈ […]