ಪೌರತ್ವ (ತಿದ್ದುಪಡಿ) ಕಾಯ್ದೆ 2019: ಮಾರ್ಗಸೂಚಿ ಪ್ರಕಟ; ಕಾನೂನಿನಲ್ಲಿ ಏನೇನಿದೆ ತಿಳಿದುಕೊಳ್ಳಿ
ನವದೆಹಲಿ: ಪೌರತ್ವ (ತಿದ್ದುಪಡಿ) ಮಸೂದೆ 2019- (CAA) ಈ ಮಸೂದೆಯು 1955 ರ ಪೌರತ್ವ ಕಾಯ್ದೆಗೆ ತಿದ್ದುಪಡಿ ಮಾಡಲು ಪ್ರಸ್ತಾಪಿಸಲಾಗಿದೆ. ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಧಾರ್ಮಿಕ ಉತ್ಪೀಡನೆಯ ಕಾರಣದಿಂದ ಪಲಾಯನಗೈದ ಹಿಂದೂ, ಸಿಖ್, ಜೈನ, ಪಾರ್ಸಿ, ಬೌದ್ದ ಹಾಗೂ ಕ್ರಿಶ್ಚಿಯನ್ ಮುಂತಾದ ಅಲ್ಪಸಂಖ್ಯಾತ ಸಮುದಾಯದ ಸಂತ್ರಸ್ತರಿಗೆ ಭಾರತೀಯ ಪೌರತ್ವವನ್ನು ನೀಡುವ ಮಸೂದೆ ಇದಾಗಿದೆ. ಹೊಸ ನಿಯಮಗಳನ್ನು ಜಾರಿಗೆ ತರುವ ಮೊದಲು, ಭಾರತದಲ್ಲಿ ಪೌರತ್ವವನ್ನು ಈ ಹಿಂದಿನ ಪೌರತ್ವ ಕಾಯಿದೆ, 1955 ರ ಮೂಲಕ ನಿಯಂತ್ರಿಸಲಾಗುತ್ತಿತ್ತು. ಈ […]
ಕೇರಳದಲ್ಲಿ ಸಿಎಎ ಜಾರಿ ಇಲ್ಲ: ಮುಖ್ಯಮಂತ್ರಿ ಪಿಣರಾಯಿ ವಿಜಯನ್
ತಿರುವನಂತಪುರಂ: ರಾಜ್ಯದಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು (ಸಿಎಎ) ತಮ್ಮ ಸರ್ಕಾರ ಜಾರಿಗೆ ತರುವುದಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಗುರುವಾರ ಪ್ರತಿಪಾದಿಸಿದ್ದಾರೆ. ತಮ್ಮ ಸರ್ಕಾರದ ಮೊದಲ ವಾರ್ಷಿಕೋತ್ಸವದ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, “ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಬಗ್ಗೆ ಸರ್ಕಾರವು ಸ್ಪಷ್ಟ ನಿಲುವನ್ನು ಹೊಂದಿದೆ. ಅದು ಹಾಗೆಯೆ ಮುಂದುವರಿಯಲಿದೆ” ಎಂದು ಹೇಳಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿಗಳು ಕಾನೂನನ್ನು ಜಾರಿಗೊಳಿಸುವುದಾಗಿ ಆಗಾಗ್ಗೆ ಹೇಳುತ್ತಿದ್ದಾರೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರ ಸ್ಪಷ್ಟ ನಿಲುವು ಹೊಂದಿದೆ. ಅದರಲ್ಲಿ […]