24 ಶಾಸಕರಿಗೆ ಸಚಿವಗಿರಿ: ಶನಿವಾರದಂದು ಪ್ರಮಾಣ ವಚನ ಸ್ವೀಕಾರ ಸಾಧ್ಯತೆ

ನವದೆಹಲಿ: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಇನ್ನೂ 24 ಸಚಿವರು ಶನಿವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ದೆಹಲಿಯಲ್ಲಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಪಕ್ಷದ ಕೇಂದ್ರ ನಾಯಕರ ನಡುವೆ ನಡೆದ ಸಭೆಯಲ್ಲಿ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಮೇ 20 ರಂದು ಸಿದ್ದರಾಮಯ್ಯ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇವರ ಜೊತೆ ಇನ್ನೂ ಎಂಟು ಮಂದಿ ಪ್ರಮಾಣ […]