ಸಂದೇಶ್‌ಖಾಲಿ ಜಾರಿ ನಿರ್ದೇಶನಾಲಯ ತಂಡದ ಮೇಲೆ ದಾಳಿ ಪ್ರಕರಣ ಸಿಬಿಐಗೆ ಹಸ್ತಾಂತರಿಸಿದ ಕಲ್ಕತ್ತಾ ಹೈಕೋರ್ಟ್
ಕೋಲ್ಕತ್ತಾ: ಭ್ರಷ್ಟಾಚಾರ ಪ್ರಕರಣ ಸಂಬಂಧಿಸಿ ತೃಣಮೂಲ ಕಾಂಗ್ರೆಸ್‌ನ ಮಾಜಿ ನಾಯಕ ಶೇಖ್ ಷಹಜಹಾನ್ ಮನೆಯಲ್ಲಿ ತನಿಖೆ ನಡೆಸಲು ತೆರಳಿದ್ದ ಜಾರಿ ನಿರ್ದೇಶನಾಲಯ (ED) ತಂಡದ ಮೇಲೆ ದಾಳಿ ನಡೆಸಿದ ಸಂದೇಶ್‌ಖಾಲಿ ಘಟನೆಯ ಪ್ರಕರಣವನ್ನು ಕಲ್ಕತ್ತಾ ಹೈಕೋರ್ಟ್ ಮಂಗಳವಾರ ಕೇಂದ್ರೀಯ ತನಿಖಾ ದಳ (CBI)ಕ್ಕೆ ವಹಿಸಿದೆ ಮತ್ತು ಷಹಜಹಾನ್‌ನನ್ನು ಕೇಂದ್ರ ಏಜೆನ್ಸಿಗೆ ಹಸ್ತಾಂತರಿಸುವಂತೆ ಪೊಲೀಸರಿಗೆ ಸೂಚಿಸಿದೆ. ಕಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಟಿ ಎಸ್ ಶಿವಜ್ಞಾನಂ ಅವರನ್ನೊಳಗೊಂಡ ವಿಭಾಗೀಯ ಪೀಠವು ನಝತ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ಸಂಖ್ಯೆ 8 […]
ಸಂದೇಶ್‌ಖಾಲಿ ಹಿಂಸಾಚಾರ: ಮಮತಾ ಬ್ಯಾನರ್ಜಿ ಸರಕಾರಕ್ಕೆ ಹೈ ಕೋರ್ಟ್ ತರಾಟೆ; ಶಹಜಹಾನ್ ಶೇಖ್ ಶರಣಾಗತಿಗೆ ಸೂಚನೆ
ಕೊಲ್ಕತ್ತ: ಸಂದೇಶ್‌ಖಾಲಿ (Sandeshkhali ) ಹಿಂಸಾಚಾರ ಕುರಿತು ಕಲ್ಕತ್ತಾ ಹೈಕೋರ್ಟ್ ಮಂಗಳವಾರ ಪಶ್ಚಿಮ ಬಂಗಾಳ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದು, ಒಬ್ಬ ವ್ಯಕ್ತಿಯು ಎಲ್ಲವನ್ನೂ ಸುಲಿಗೆ ಮಾಡುತ್ತಿರಲು ಸಾಧ್ಯವಿಲ್ಲ ಮತ್ತು ಹಲವಾರು ಮಹಿಳೆಯರಿಂದ ಲೈಂಗಿಕ ದೌರ್ಜನ್ಯ ಮತ್ತು ಭೂಹಗರಣದ ಆರೋಪ ಹೊತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕ ಶಹಜಹಾನ್ ಶೇಖ್ ನನ್ನು ರಾಜ್ಯವು ಬೆಂಬಲಿಸಬಾರದು ಎಂದು ಹೇಳಿದೆ. ರಾಜ್ಯ ಸರ್ಕಾರವು ಆತನನ್ನು ಪ್ರೋತ್ಸಾಹಿಸಲು ಸಾಧ್ಯವಿಲ್ಲ. ಆತ ಹಾನಿ ಮಾಡಿದ್ದಾನೆ ಎಂದು ತೋರಿಸಲು ಪ್ರಾಥಮಿಕ ಸಾಕ್ಷ್ಯಗಳಿವೆ. ಒಬ್ಬ ವ್ಯಕ್ತಿಯು ಇಡೀ ಜನಸಂಖ್ಯೆಯನ್ನು […]