ಉಡುಪಿ: ಶ್ರೀಕೃಷ್ಣ ಮಠದಲ್ಲಿ ಶ್ರೀಗಳಿಂದ ಕ್ಯಾಲೆಂಡರ್ ಬಿಡುಗಡೆ
ಉಡುಪಿ: ಶ್ರೀಕೃಷ್ಣ ಮಠದಲ್ಲಿ, ಮಂಗಳೂರಿನ ಮುಕ್ಕದಲ್ಲಿರುವ ಶ್ರೀನಿವಾಸ್ ವಿಶ್ವವಿದ್ಯಾಲಯದ 2020 ನೇಯ ಇಸವಿಯ ಕ್ಯಾಲೆಂಡರನ್ನು ಪರ್ಯಾಯ ಪಲಿಮಾರು ಮಠಾಧೀಶರಾದ ಶ್ರೀ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಶ್ರೀನಿವಾಸ್ ವಿಶ್ವವಿದ್ಯಾಲಯದ ಪ್ರತಿನಿಧಿಗಳು ಉಪಸ್ಥಿತರಿದ್ದರು.