ಪಶ್ಚಿಮಘಟ್ಟ ತಪ್ಪಲಿನ ಔಷಧೀಯ ಸಸ್ಯಗಳ ಬೆಳೆಗೆ ಸರ್ವ ಸಹಕಾರ: ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕೊಡ್ಗಿ

ಉಡುಪಿ: ಉಡುಪಿ, ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿರುವ ಎಲ್ಲಾ ಕ್ಯಾಂಪ್ಕೋ ಸದಸ್ಯರ ಮೂಲಕ ಪಶ್ಚಿಮಘಟ್ಟ ತಪ್ಪಲಿನ ಔಷಧೀಯ ಸಸ್ಯಗಳ ಬೆಳೆಗೆ ಎಲ್ಲಾ ರೀತಿಯ ಅಗತ್ಯ ಪ್ರೋತ್ಸಾಹ ನೀಡುವುದಾಗಿ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕೊಡ್ಗಿ ಹೇಳಿದರು. ಅವರು ಗುರುವಾರ ಕಾರ್ಕಳ ತಾಲೂಕು ಬಜಗೋಳಿಯ ತ್ರಿಭುವನ ಮಾಳದಲ್ಲಿ, ಕರ್ನಾಟಕ ರಾಜ್ಯ ಔಷಧಿ ಗಿಡಮೂಲಿಕಾ ಪ್ರಾಧಿಕಾರ, ಕರ್ನಾಟಕ ಜೀವವೈವಿಧ್ಯ ಮಂಡಳಿ ಹಾಗೂ ಕಾಂಪ್ಕೋ ಮಂಗಳೂರು ಇವರ ಸಹಯೋಗದಲ್ಲಿ ರಾಷ್ಟ್ರೀಯ ಔಷಧಿ ಗಿಡಮೂಲಿಕಾ ಮಂಡಳಿ ಪ್ರಾಯೋಜಿತ ಯೋಜನೆ […]

ಕೇರಳ ಮಾದರಿ ಕರ್ನಾಟಕದಲ್ಲೂ ರಬ್ಬರಿಗೆ ಬೆಂಬಲ ಬೆಲೆ ಘೋಷಿಸಿ: ಮುಖ್ಯಮಂತ್ರಿಗಳಿಗೆ ಕ್ಯಾಂಪ್ಕೋ ಮನವಿ

ಮಂಗಳೂರು: ಕರ್ನಾಟಕ ಸರಕಾರವು ಕೇರಳ ಸರಕಾರದ ಮಾದರಿಯಲ್ಲೇ ರಬ್ಬರಿಗೆ ಬೆಂಬಲ ಬೆಲೆ ಘೋಷಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಕ್ಯಾಂಪ್ಕೋ ಮನವಿ ಮಾಡಿದೆ. ರಾಜ್ಯದ ಮಲೆನಾಡು ಮತ್ತು ಕರಾವಳಿ ಭಾಗದ ಹೆಚ್ಚಿನ ರೈತರು ತಮ್ಮ ಜೀವನಾಧಾರಕ್ಕೆ ಅಡಿಕೆಯೊಂದಿಗೆ ರಬ್ಬರ್ ಕೃಷಿಯನ್ನು ಅವಲಂಬಿಸಿದ್ದಾರೆ. ರಬ್ಬರಿನ ಪರ್ಯಾಯ ಕೃಷಿಯಿಂದ ರೈತರು ಆರ್ಥಿಕ ಸ್ವಾವಲಂಬನೆ ಸಾಧಿಸಲು ಸಾಧ್ಯವಾಗಿದೆ. ಇತ್ತೀಚಿನ ರಬ್ಬರ್ ಮಾರುಕಟ್ಟೆಯಲ್ಲಿ ಉಂಟಾದ ದರ ಕುಸಿತವು ಕೃಷಿಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪರಿಹಾರವಿಲ್ಲದೆ ರಬ್ಬರ್ ಮರಗಳನ್ನು ಕಡಿಯುವ ನಿರ್ಧಾರ ಮಾಡಿದ್ದಾರೆ ಎಂದು ಮನವಿಯಲ್ಲಿ ವಿವರಿಸಲಾಗಿದೆ. […]

ಪದವೀಧರರಿಗೆ ಕ್ಯಾಂಪ್ಕೋ ನಲ್ಲಿ ಉದ್ಯೋಗ: ಅರ್ಜಿ ಸಲ್ಲಿಸಲು ಇಂದು ಕಡೆ ದಿನ

ಮಂಗಳೂರು: ಸೆಂಟ್ರಲ್ ಅರೆಕಾನಟ್ ಮತ್ತು ಕೋಕೋ ಮಾರ್ಕೆಟಿಂಗ್ ಮತ್ತು ಪ್ರೊಸೆಸಿಂಗ್ ಕೋ-ಆಪರೇಟಿವ್ ಲಿಮಿಟೆಡ್ (ಕ್ಯಾಂಪ್ಕೋ) ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಅಸಿಸ್ಟೆಂಟ್ ಕ್ವಾಲಿಟಿ ಅಶ್ಯೂರೆನ್ಸ್ ಸೂಪರ್‌ವೈಸರ್, ಅಸಿಸ್ಟೆಂಟ್ ಪ್ರೊಡಕ್ಷನ್ ಸೂಪರ್‌ವೈಸರ್ ಹುದ್ದೆಗಳ ನೇಮಕಾತಿ ನಡೆಯಲಿದೆ. ಮಂಗಳೂರಿನಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಇಂದು ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದ್ದು ಆಸಕ್ತರು ಕೂಡಲೇ ಅರ್ಜಿ ಸಲ್ಲಿಸತಕ್ಕದ್ದು. ಸಂಸ್ಥೆಯ ಹೆಸರು: ಸೆಂಟ್ರಲ್ ಅರೆಕಾನಟ್ ಮತ್ತು ಕೋಕೋ ಮಾರ್ಕೆಟಿಂಗ್ ಮತ್ತು ಪ್ರೊಸೆಸಿಂಗ್ ಕೋ-ಆಪರೇಟಿವ್ […]