ಮಂಗಳೂರು: ಜ.31 ರಂದು ಕೆನರಾ ಕಾಲೇಜಿನಲ್ಲಿ ಉದ್ಯೋಗಮೇಳ
ಮಂಗಳೂರು: ರಾಷ್ಟ್ರೀಯ ವೃತ್ತಿ ಸೇವಾ ಯೋಜನೆಯ ಮಾದರಿ ವೃತ್ತಿ ಕೇಂದ್ರದ ಅಡಿಯಲ್ಲಿ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಂಗಳೂರು ಹಾಗೂ ಕೆನರಾ ಕಾಲೇಜು ಮಂಗಳೂರು ಇದರ ಸಂಯುಕ್ತಾಶ್ರಯದಲ್ಲಿ ಜ.31 ಮಂಗಳವಾರದಂದು ಮಂಗಳೂರಿನ ಕೆನರಾ ಕಾಲೇಜಿನಲ್ಲಿ ಉದ್ಯೋಗಮೇಳವನ್ನು ಆಯೋಜಿಸಲಾಗಿದೆ. ಉದ್ಯೋಗ ಮೇಳದಲ್ಲಿ 25 ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ತಮ್ಮ ಸಂಸ್ಥೆಯಲ್ಲಿನ ಖಾಲಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಲಿದ್ದಾರೆ. ಹತ್ತನೇ ತರಗತಿ, ಪಿಯುಸಿ, ಪದವಿ ಅಥವಾ ಸ್ನಾತಕೋತ್ತರ ಪದವೀಧರರು […]