ಮಂಗಳೂರು:ಕೆನರಾ ಬ್ಯಾಂಕ್ ಸಿಬ್ಬಂದಿಗಳಿಗೆ ಲಸಿಕೆ ಅಭಿಯಾನಕ್ಕೆ ಚಾಲನೆ
ಮಂಗಳೂರು: ಜಿಲ್ಲಾಡಳಿತವು ಕೆನರಾ ಬ್ಯಾಂಕ್‌ನ ಮಂಗಳೂರು ವಲಯ ಕಚೇರಿಯಲ್ಲಿ ಆಯೋಜಿಸಿದ್ದ ಬ್ಯಾಂಕರ‍್ಸ್‌ಗಳಿಗೆ ಲಸಿಕೆ ಅಭಿಯಾನಕ್ಕೆ ಬುಧವಾರ ಶಾಸಕ ವೇದವ್ಯಾಸ ಕಾಮತ್ ಚಾಲನೆ ನೀಡಿದರು. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಮಾತನಾಡಿ ಕೋವಿಡ್ ತೀವ್ರ ಸಂದರ್ಭದಲ್ಲೂ ಗ್ರಾಹಕರಿಗೆ ಯಾವುದೇ ತೊಂದರೆಯಾಗದಂತೆ ಬ್ಯಾಂಕರ‍್ಸ್ ನವರು ಸೇವೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಆಧ್ಯತಾ ನೆಲೆಯಲ್ಲಿ ಲಸಿಕೆ ನೀಡಲು ಯೋಜನೆ ಹಾಕಿಕೊಂಡಿದೆ. ಬ್ಯಾಂಕ್ ಸಿಬ್ಬಂದಿಗಳು ಸಾರ್ವಜನಿಕರೊಂದಿಗೆ ನೇರ ಸಂಪರ್ಕ ಇರುವುದರಿಂದ ಹೆಚ್ಚು ಸುರಕ್ಷಿತಾ ಕ್ರಮ ಕೈಗೊಳ್ಳಬೇಕು. ಹೆಚ್ಚು ಜಾಗೃತರಾಗಬೇಕು ಎಂದರು. ಬ್ಯಾಂಕ್‌ನ ಮಹಾಪ್ರಬಂಧಕ […]