ಕ್ಯಾನ್ಸರ್ ಅನ್ನು ಆರಂಭದಲ್ಲೇ ಪತ್ತೆ ಹಚ್ಚಿದರೆ ಗುಣಮುಖರಾಗಲು ಸಾಧ್ಯ: ಸುಮಿತ್ರಾ ನಾಯಕ್
ಉಡುಪಿ, ಫೆ.4: ಕ್ಯಾನ್ಸರ್‌ನ ಲಕ್ಷಣಗಳ ಬಗ್ಗೆ ಅರಿತುಕೊಂಡು, ಖಾಯಿಲೆಯನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಿದಲ್ಲಿ, ಕ್ಯಾನ್ಸರ್‌ನಿಂದ ಗುಣಮುಖವಾಗಲು ಸಾಧ್ಯವಿದೆ ಎಂದು ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್ ಹೇಳಿದರು. ಅವರು ಇಂದು, ಅಜ್ಜರಕಾಡು ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟೀಯ ಆರೋಗ್ಯ ಅಭಿಯಾನ, ಜಿಲ್ಲಾ ಆಸ್ಪತ್ರೆ (ಎನ್.ಸಿ.ಡಿ ವಿಭಾಗ), ಜಿಲ್ಲಾ ಸರ್ವೇಕ್ಷಣಾ ಘಟಕ (ಎನ್.ಸಿ.ಡಿ&ಎನ್.ಟಿ.ಸಿ.ಪಿ ಘಟಕ), ದಂತ ವೈದ್ಯಕೀಯ ವಿಭಾಗ ಜಿಲ್ಲಾ ಆಸ್ಪತ್ರೆ, ಭಾರತೀಯ […]