ಆಕ್ಸೆಸ್‌ಲೈಫ್ ಮಾಹೆ ಮಣಿಪಾಲ ಕೇಂದ್ರ (ಹೋಮ್ ಆವೇ ಫ್ರಮ್ ಹೋಮ್) ಉದ್ಘಾಟನೆ

ಮಣಿಪಾಲ: ಕಸ್ತೂರ್ಬಾ ವೈದ್ಯಕೀಯ ಕಾಲೇಜು, ಮಣಿಪಾಲ ಮತ್ತು ಕಸ್ತೂರ್ಬಾ ಆಸ್ಪತ್ರೆ, ಮಾಹೆ  ಮಣಿಪಾಲದ ಮಕ್ಕಳ ರಕ್ತಶಾಸ್ತ್ರ  ಮತ್ತು ಆಂಕೊಲಾಜಿ ವಿಭಾಗದ ಸಹಯೋಗದೊಂದಿಗೆ ಆಕ್ಸೆಸ್‌ಲೈಫ್  ಮಾಹೆ  ಮಣಿಪಾಲ ಕೇಂದ್ರವನ್ನು (ಕ್ಯಾನ್ಸರ್ ಪೀಡಿತ ಮಕ್ಕಳು ಮತ್ತು ಅವರ ಆರೈಕೆದಾರರಿಗಾಗಿ ಹೋಮ್ ಆವೇ ಫ್ರಮ್ ಹೋಮ್) ಇಂದು ಉದ್ಘಾಟಿಸಲಾಯಿತು. ಇದು ಕ್ಯಾನ್ಸರ್ ಇರುವ ಮಕ್ಕಳಿಗೆ ಮತ್ತು ಅವರ ಆರೈಕೆ ಮಾಡುವವರಿಗೆ ಉಚಿತವಾಗಿ  ವಸತಿ, ಪೌಷ್ಟಿಕ ಆಹಾರ, ಸಮಾಲೋಚನೆ ಮತ್ತು ಶೈಕ್ಷಣಿಕ ಸಹಾಯ ಸೇವೆಗಳನ್ನು ಒದಗಿಸುತ್ತದೆ. ಇದು ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, […]