ಅಭ್ಯರ್ಥಿಗಳ ಹೆಸರು ಅಳವಡಿಸುವ ಕಾರ್ಯ ಆರಂಭ: ಜಿಲ್ಲಾಧಿಕಾರಿ
ಏಪ್ರಿಲ್ 18 ರಂದು ನಡೆಯುವ ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಹೆಸರನ್ನು ಇವಿಎಂ ಮತ್ತು ವಿವಿ ಪ್ಯಾಟ್ ಗಳಲ್ಲಿ ಅಳವಡಿಸುವ ಕಾರ್ಯ ಇಂದಿನಿಂದ ಆರಂಭಗೊಂಡಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಉಡುಪಿ ಜಿಲ್ಲೆಯ ಕಾಪು ಮತ್ತು ಉಡುಪಿ ವಿಧಾನಸಭಾ ಕ್ಷೇತ್ರದ ಇವಿಎಂ ಮತ್ತು ವಿವಿ ಪ್ಯಾಟ್ ಗಳಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಹೆಸರನ್ನು ಅಳವಡಿಸುವ ಕಾರ್ಯ […]