ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ CAPF ಕಾನ್ಸ್‌ಟೇಬಲ್ ಪರೀಕ್ಷೆ ನಡೆಸಲು ಕೇಂದ್ರ ಗೃಹ ಸಚಿವಾಲಯ ನಿರ್ಧಾರ
ನವದೆಹಲಿ: 2024 ಜ.1ರ ಬಳಿಕ ಕೇಂದ್ರ ಅರೆಸೇನಾ ಪಡೆಗಳು ಅಥವಾ CAPF ಗಳಲ್ಲಿ ಕಾನ್ಸ್‌ಟೇಬಲ್‌ಗಳ (ಜನರಲ್ ಡ್ಯೂಟಿ) ನೇಮಕಾತಿ ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲಿಷ್‌ಗೆ ಹೆಚ್ಚುವರಿಯಾಗಿ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲಾಗುವುದು ಎಂದು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯವು ನಿರ್ಧರಿಸಿದೆ. CAPF ಗಳಲ್ಲಿ ಸ್ಥಳೀಯ ಯುವಕರ ಭಾಗವಹಿಸುವಿಕೆಗೆ ಉತ್ತೇಜನ ನೀಡಲು ಮತ್ತು ಪ್ರಾದೇಶಿಕ ಭಾಷೆಗಳನ್ನು ಪ್ರೋತ್ಸಾಹಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಉಪಕ್ರಮದಲ್ಲಿ ತೆಗೆದುಕೊಂಡ “ಹೆಗ್ಗುರುತಿನ” ನಿರ್ಧಾರ ಎಂದು ಸಚಿವಾಲಯ ಬಣ್ಣಿಸಿದೆ. ಪ್ರಶ್ನೆ ಪತ್ರಿಕೆಗಳನ್ನು […]
ಸಿಎಪಿಎಫ್ ಮತ್ತು ಅಸ್ಸಾಂ ರೈಫಲ್ಸ್ ನಲ್ಲಿ10% ಖಾಲಿ ಹುದ್ದೆಗಳನ್ನು ಅಗ್ನಿವೀರರಿಗೆ ಕಾಯ್ದಿರಿಸಲಾಗುವುದು: ಅಮಿತ್ ಶಾ
ನವದೆಹಲಿ: ಅಗ್ನಿಪಥ್ ಯೋಜನೆಯಡಿಯಲ್ಲಿ ಭಾರತೀಯ ಸೇನೆಯಲ್ಲಿ ನಾಲ್ಕು ವರ್ಷಗಳ ಅಗ್ನಿವೀರ್ ಸೇವೆ ಸಲ್ಲಿಸಿ ವಾಪಾಸಾಗುವವರ ಉದ್ಯೋಗ ಭದ್ರತೆಯ ದೃಷ್ಟಿಯಿಂದ ಸಿಎಪಿಎಫ್ ಮತ್ತು ಅಸ್ಸಾಂ ರೈಫಲ್ಸ್ ನೇಮಕಾತಿಯಲ್ಲಿ 10% ಖಾಲಿ ಹುದ್ದೆಗಳನ್ನು ಕಾಯ್ದಿರಿಸಲು ಕೇಂದ್ರ ಗೃಹ ಸಚಿವಾಲಯವು ನಿರ್ಧರಿಸಿದೆ. ಈ ಎರಡು ಪಡೆಗಳಲ್ಲಿನ ನೇಮಕಾತಿಗಾಗಿ ಅಗ್ನಿವೀರ್‌ಗಳ ಗರಿಷ್ಠ ವಯಸ್ಸಿನ ಮಿತಿಯನ್ನು ಮೀರಿ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಅಗ್ನಿವೀರ್‌ನ ಮೊದಲನೆ ಬ್ಯಾಚ್‌ಗೆ, ಗರಿಷ್ಠ ವಯಸ್ಸಿನ ಮಿತಿಯನ್ನು ಮೀರಿ 5 ವರ್ಷಗಳವರೆಗೆ ವಯಸ್ಸಿನ ಸಡಿಲಿಕೆ ಇರುತ್ತದೆ ಎಂದು ಕೇಂದ್ರ […]