ವರಂಗ ಬಳಿ ಕಂಟೈನರ್ ಗೆ ಕಾರು ಡಿಕ್ಕಿ; ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರು
ಹೆಬ್ರಿ ತಾಲೂಕಿನ ವರಂಗ ಸಮೀಪ ಇಂದು ಬೆಳಿಗ್ಗೆ ಕಂಟೈನರ್ ಲಾರಿ ಹಾಗೂ ಕ್ರೆಟಾ ಕಾರು ಮಧ್ಯೆ ಅಪಘಾತ ಸಂಭವಿಸಿದೆ.ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ತೀರ್ಥಹಳ್ಳಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕಂಟೈನರ್ ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ. ವರಂಗದಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಕಾರು ಚಾಲಕ ಇದನ್ನು ಲೆಕ್ಕಿಸದೆ ಅಜಾಗರೂಕತೆಯಿಂದ ಅತೀ ವೇಗವಾಗಿ ಕಾರು ಚಲಾಯಿಸಿಕೊಂಡು ಬಂದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಕಾರಿನಲ್ಲಿದ್ದವರು […]