ಸದ್ಯದಲ್ಲೇ ಕೊಳಚೆ ನೀರಿನಿಂದ ಓಡಲಿವೆ ಕಾರು, ಟ್ರಕ್, ಬಸ್.!
ನವದೆಹಲಿ: ದೇಶದ ಪ್ರಮುಖ ನಗರಗಳಲ್ಲಿ ವಾಯುಮಾಲಿನ್ಯದಿಂದ ವಾತಾವರಣ ದಿನೇ ದಿನೇ ಹದಗೆಡುತ್ತಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಗ್ರೀನ್ ಹೈಡ್ರೋಜನ್ ಬಳಸಿ ಕಾರು, ಟ್ರಕ್ ಮತ್ತು ಬಸ್‌ಗಳನ್ನು ಓಡಿಸುವ ಯೋಜನೆಯನ್ನು ಹಾಕಿಕೊಂಡಿದೆ. ನಗರಗಳ ಕೊಳಚೆ ನೀರು ಮತ್ತು ಘನ ತ್ಯಾಜ್ಯದಿಂದ ಉತ್ಪಾದಿಸಬಹುದಾದ ಗ್ರೀನ್ ಹೈಡ್ರೋಜನ್ ಬಳಸಿ ಬಸ್, ಕಾರು ಮತ್ತು ಟ್ರಕ್‌ಗಳನ್ನು ಓಡಿಸುವ ಯೋಜನೆ ಇದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ. 6ನೇ ರಾಷ್ಟ್ರೀಯ ಹಣಕಾಸು ಶೃಂಗವನ್ನು ಉದ್ದೇಶಿಸಿ ಮಾತನಾಡಿದರು. […]
ಮಂಗಳೂರು: ಕಾರುಗಳೆರಡರ ಮಧ್ಯೆ ಢಿಕ್ಕಿ, ಎಂಟು ಮಂದಿಗೆ ಗಾಯ
ಮಂಗಳೂರು: ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೈಕಂಬದಲ್ಲಿ ಕಾರುಗಳೆರಡರ ಮಧ್ಯೆ ಢಿಕ್ಕಿ ಸಂಭವಿಸಿ ಎಂಟು ಮಂದಿ ಗಾಯಗೊಂಡಿರುವ ಘಟನೆ ಬುಧವಾರ ಸಂಭವಿಸಿದೆ. ಕಾರಿನಲ್ಲಿದ್ದ ಮಗು ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳಿಗೆ ಪುತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಗಳಿದ್ದ ಕಾರು ಹಾಗೂ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಮತ್ತೊಂದು ಕಾರುಗಳ ಮಧ್ಯೆ ಅಪಘಾತ ಸಂಭವಿಸಿದೆ. ಅಪಘಾತ ಸ್ಥಳಕ್ಕೆ ಸುಬ್ರಹ್ಮಣ್ಯ ಹಾಗೂ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.