ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರ ವಿರುದ್ಧ ಕೇಸ್; ಜಿಲ್ಲಾಡಳಿತದ ಕ್ರಮಕ್ಕೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಖಂಡನೆ

ಕೊರಗರ ಮೇಲಿನ ದೌರ್ಜನ್ಯ ಖಂಡಿಸಿ ಕಾಂಗ್ರೆಸ್ ನಡೆಸಿದ ಪ್ರತಿಭಟನೆಯಲ್ಲಿ ಪಾಲ್ಗೊಂಡವರ ವಿರುದ್ಧ ಕೇಸು ದಾಖಲಿಸಿರುವ ಜಿಲ್ಲಾಡಳಿತದ ಕ್ರಮವನ್ನು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಖಂಡಿಸಿದ್ದಾರೆ. ದೇಶದ ಮೂಲ ನಿವಾಸಿಗಳಾದ ಕೊರಗರಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್, ಕೋವಿಡ್ ನಿಯಮಾವಳಿಗಳನ್ನು ಪಾಲಿಸಿಕೊಂಡು ಪ್ರತಿಭಟನಾ ಮೆರವಣಿಗೆಯನ್ನು ನಡೆಸಿತ್ತು. ಆದರೂ ಕಾಂಗ್ರೆಸ್ ನಾಯಕರು ಸಹಿತ 22 ಜನರ ವಿರುದ್ಧ ಜಿಲ್ಲಾಡಳಿತ ಸುಳ್ಳು ಪ್ರಕರಣ ದಾಖಲಿಸಿದೆ. ಆದರೆ ಜಿಲ್ಲೆಯಲ್ಲಿ ಬಿಜೆಪಿ ಪಕ್ಷದಿಂದ ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿ ಅನೇಕ […]