ರಸ್ತೆಗಳ ಬ್ಲಾಕ್‌ಸ್ಪಾಟ್‌ನಲ್ಲಿ ಅಪಘಾತವಾಗಿ ಜೀವಹಾನಿಯಾದಲ್ಲಿ ಅಧಿಕಾರಿಗಳ ವಿರುದ್ಧ ಪ್ರಕರಣ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಲಾಗಿರುವ ರಸ್ತೆ ಬ್ಲಾಕ್‌ಸ್ಪಾಟ್‌ಗಳನ್ನು ಸಂಬಂಧಪಟ್ಟ ಹೆದ್ದಾರಿ ಇಲಾಖೆಗಳ ಅಧಿಕಾರಿಗಳು 15 ದಿನಗಳಲ್ಲಿ ತೆರವುಗೊಳಿಸಬೇಕು. 15 ದಿನದ ನಂತರ ಆ ಪ್ರದೇಶದಲ್ಲಿ ಅಪಘಾತ ಸಂಭವಿಸಿ ಜೀವಹಾನಿಯಾದಲ್ಲಿ ರಸ್ತೆಯನ್ನು ನಿರ್ಮಿಸಿ, ನಿರ್ವಹಿಸುತ್ತಿರುವ ಇಲಾಖೆಯ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಎಚ್ಚರಿಕೆ ನೀಡಿದರು. ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್‌ನಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ […]