ಗೇರು ಬೆಳೆಯಲ್ಲಿ ಎಲೆ ತಿನ್ನುವ ದುಂಬಿಗಳನ್ನು ಹೇಗೆ ನಿಯಂತ್ರಿಸೋದು :ಇಲ್ಲಿದೆ ಕೃಷಿಕರಿಗೆ ಸಲಹೆ
ಉಡುಪಿ : ಉಡುಪಿ ಜಿಲ್ಲೆಯ ಹಲವು ಭಾಗಗಳಲ್ಲಿ ಗೇರು ಬೆಳೆಯಲ್ಲಿ ಎಲೆ ತಿನ್ನುವ ದುಂಬಿಗಳು ಕಾಣಿಸಿಕೊಳ್ಳುತ್ತಿದ್ದು, ಸೂಕ್ತ ಹತೋಟಿ ಕ್ರಮವನ್ನು ಕೈಗೊಳ್ಳುವುದು ಉತ್ತಮ. ಈ ದುಂಬಿಗಳನ್ನು ವೈಜ್ಞಾನಿಕವಾಗಿ ಮೋನೊಲಿಪ್ಟಾ ಲೊಂಗಿಟಾರ್ಸಸ್ ಎಂದು ಕರೆಯಲಾಗುತ್ತದೆ. ಪಶ್ಚಿಮ ಕರಾವಳಿ ಭಾಗದಲ್ಲಿ ಕಂಡು ಬರುವ ಪ್ರಮುಖ ಕೀಟವಾಗಿದ್ದು, ಕೆಂಪು ಬಣ್ಣದಿಂದ ಕೂಡಿರುತ್ತದೆ. ಈ ದುಂಬಿಗಳು, ಅಧಿಕ ಪ್ರಮಾಣದಲ್ಲಿ ಗುಂಪು ಗುಂಪಾಗಿ ಕಂಡು ಬಂದು, ಎಳೆಯ ಗಿಡಗಳು, ಮರದ ಚಿಗುರುಗಳು ಹಾಗೂ ಸಸ್ಯಾಗಾರದ ಗಿಡಗಳಲ್ಲಿ ಅಧಿಕ ಹಾನಿಯನ್ನುಂಟು ಮಾಡುತ್ತದೆ. ಮುಂಗಾರಿನ ಸಮಯದಲ್ಲಿ (ಜೂನ್-ಅಗಸ್ಟ್) […]