ನಾಳೆ (ಸೆ. 29) ಕರ್ನಾಟಕ ಬಂದ್: ಸಾರಿಗೆ ಸಂಚಾರ ಅಸ್ತವ್ಯಸ್ತ ಸಾಧ್ಯತೆ; ಅಗತ್ಯ ಸೇವೆಗಳು ಅಬಾಧಿತ
ಬೆಂಗಳೂರು: ರಾಜ್ಯದ ಜನರು ನೀರಿಗಾಗಿ ತತ್ತರಿಸುತ್ತಿರುವಾಗ ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಕನ್ನಡ ಪರ ಸಂಘಟನೆಗಳು ನಾಳೆ (ಸೆಪ್ಟೆಂಬರ್ 29 ಶುಕ್ರವಾರ) ಕರೆ ನೀಡಿರುವ ಕರ್ನಾಟಕ ಬಂದ್ ಗೆ ರಾಜ್ಯಾದ್ಯಂತ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ. ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಡೆಯುತ್ತಿರುವ ಬಂದ್‌ನಲ್ಲಿ ಪಾಲ್ಗೊಳ್ಳಲು ಹಲವು ಸಂಘಟನೆಗಳು ಮುಂದೆ ಬಂದು ಬೆಂಬಲ ಸೂಚಿಸಿವೆ. ರಾಜ್ಯದ ನಾನಾ ಭಾಗಗಳಲ್ಲಿರುವ ಸ್ಥಳೀಯ ಸಂಘಟನೆಗಳು ಕೂಡಾ ಜೈಜೋಡಿಸಿವೆ. ಕರ್ನಾಟಕ ಬಂದ್ಗೆ ನೈತಿಕ ಬೆಂಬಲ ನೀಡಲು […]
ಕಾವೇರಿ ನಾವು ಕೊಡೆವು; ನಾವು ಬಿಡೆವು: ಕರ್ನಾಟಕ-ತಮಿಳುನಾಡಿನಲ್ಲಿ ‘ಕಾವೇರಿ’ದ ಜಲ ಕದನ; ಬೆಂಗಳೂರು ಬಂದ್ ಗೆ ಕರೆ ನೀಡಿದ ಸಂಘಟನೆಗಳು
ಚೆನ್ನೈ: ಭಾನುವಾರ ತಮಿಳುನಾಡಿನಲ್ಲಿ ಕಾವೇರಿ ಜಲವಿವಾದದ ಪ್ರತಿಭಟನೆ ತೀವ್ರಗೊಂಡಿದ್ದು, ತಿರುಚ್ಚಿಯ ರೈತರು ತಮ್ಮ ರಾಜ್ಯಕ್ಕೆ ನದಿ ನೀರು ಬಿಡುವಂತೆ ಒತ್ತಾಯಿಸಿದ್ದತೆ ಇತ್ತ ಕನ್ನಡ ಪರ ಸಂಘಟನೆಗಳು ಹಾಗೂ ಮಂಡ್ಯದಲ್ಲಿ ರೈತರು ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ನೆರೆಯ ರಾಜ್ಯಕ್ಕೆ ಕಳುಹಿಸುವಷ್ಟು ನೀರಿಲ್ಲ ಎಂಬುದು ಕರ್ನಾಟಕ ಸರ್ಕಾರದ ವಾದವಾದರೂ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ರಾಜತಾಂತ್ರಿಕವಾಗಿ ಸಮಸ್ಯೆಯನ್ನು ನಿಭಾಯಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತಿದ್ದಾರೆ ಎಂದು ಡಿಎಂಕೆ ಹೇಳಿದೆ. ತಮಿಳುನಾಡು ಮತ್ತು ಕರ್ನಾಟಕದಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು, ಎರಡೂ ರಾಜ್ಯಗಳ ರೈತರು ತಮ್ಮ ಪ್ರತಿಭಟನೆಯನ್ನು […]
ಕಾವೇರಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನಿರ್ಧಾರಕ್ಕೆ ತಲೆಬಾಗಬೇಕಾಗಿದೆ: ಲಕ್ಷ್ಮೀ ಹೆಬ್ಬಾಳ್ಕರ್
ಉಡುಪಿ: ರಾಜ್ಯದ ಮುಖ್ಯಮಂತ್ರಿಗಳು ಮೂರು ದಿನ ದೆಹಲಿಯಲ್ಲಿದ್ದು ಕಾವೇರಿ ನೀರು ಹಂಚಿಕೆ ಕುರಿತಾಗಿ ಚರ್ಚೆ ಮಾಡಿದ್ದಾರೆ. ಕಾವೇರಿ ನದಿ ನೀರು ಹಂಚಿಕೆಯಲ್ಲಿ ರಾಜ್ಯ ಸರ್ಕಾರದ ನಿಲುವು ಬಹಳ ಸ್ಪಷ್ಟವಾಗಿದೆ. ಸುಪ್ರೀಂ ಕೋರ್ಟ್ ನ ಆದೇಶವನ್ನು ನಾವು ಪಾಲಿಸಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಅವರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮಳೆಗಾಗಿ ಪ್ರಾರ್ಥಿಸಬೇಕು. ರಾಜ್ಯಕ್ಕೆ ಅನ್ಯಾಯ ಆಗಬಾರದು ಎಂಬುದು ನನ್ನ ನಿಲುವಾಗಿದೆ. ಕಾಂಗ್ರೆಸ್ ಜನಪರವಾಗಿದ್ದು, ಜನರನ್ನು ಬಿಟ್ಟು ಬೇರೆ ಏನು ಮಾಡಲು ಸಾಧ್ಯವಿಲ್ಲ. ನೀರಾವರಿ […]
‘ಕಾವೇರಿ’ದ ಜಲ ಕದನ: ಪ್ರಾಧಿಕಾರದ ನಿರ್ಧಾರಕ್ಕೆ ‘ಸುಪ್ರೀಂ’ ಮನ್ನಣೆ; ಕರ್ನಾಟಕದಲ್ಲಿ ಭುಗಿಲೆದ್ದ ಪ್ರತಿಭಟನೆ
ಬೆಂಗಳೂರು: ತಮಿಳುನಾಡಿಗೆ 5,000 ಕ್ಯೂಸೆಕ್ ನೀರು ಬಿಡುವಂತೆ ರಾಜ್ಯಕ್ಕೆ ನಿರ್ದೇಶಿಸಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಎಂಎ) ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್‌ಸಿ) ಆದೇಶಗಳನ್ನು ಎತ್ತಿಹಿಡಿಯುವ ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಕರ್ನಾಟಕದಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ. ಮೈಸೂರು, ಮಂಡ್ಯ ಮತ್ತು ಬೆಂಗಳೂರಿನಂತಹ ನಗರಗಳಲ್ಲಿ ರೈತ ಸಂಘಟನೆಗಳು ಮತ್ತು ಕನ್ನಡ ಪರ ಸಂಘಟನೆಗಳು ಕರ್ನಾಟಕದ ಕಾವೇರಿ ನದಿ ಜಲಾನಯನ ಜಿಲ್ಲೆಗಳಾದ್ಯಂತ ಪ್ರತಿಭಟನೆಗಳನ್ನು ಆಯೋಜಿಸಿವೆ. ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿರುವ ಸಂಘಟನೆಗಳು ತಮಿಳುನಾಡಿಗೆ ನೀರು ಬಿಡದಂತೆ ರಾಜ್ಯ ಸರ್ಕಾರಕ್ಕೆ […]