ಇನ್ಮುಂದೆ ಪೊಲೀಸ್ ಇಲಾಖೆಯ ಕಣ್ಣಲ್ಲಿ ಸಿಸಿಟಿವಿ ದೃಶ್ಯಾವಳಿ ಸೇಫ್ : ಇದು “ಸೇಫ್ ಕುಂದಾಪುರ ಪ್ರಾಜೆಕ್ಟ್’
ಕುಂದಾಪುರ : ‘ಸೇಫ್ ಕುಂದಾಪುರ ಪ್ರಾಜೆಕ್ಟ್’ ಮೂಲಕ ಕುಂದಾಪುರ ಆಸು-ಪಾಸಿನ ಸಿಸಿ ಟಿವಿ ದೃಶ್ಯಾವಳಿಗಳ ಕಣ್ಗಾವಲು ವ್ಯವಸ್ಥೆ ಸಂಪೂರ್ಣವಾಗಿ ಪೊಲೀಸ್‌ಇಲಾಖೆಯ ಹಿಡಿತದಲ್ಲಿಯೇ ನಡೆಯಲಿದೆ. ಪೊಲೀಸ್ ಇಲಾಖೆಗೆ ಸಿಸಿ ಟಿವಿ ದೃಶ್ಯಾವಳಿಗಳು ತನಿಖೆಯ ಹಂತದಲ್ಲಿ ಅತ್ಯಂತ ಉಪಯೋಗಕ್ಕೆ ಬರುವುದರಿಂದ ಸಾರ್ವಜನಿಕರಿಗೆ ಅಗತ್ಯ ಕಡೆಗಳಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಿಕೊಳ್ಳಲು ಇಲಾಖೆಯಿಂದ ಸೂಕ್ತ ಮಾರ್ಗದರ್ಶನ ನೀಡಲಾಗುತ್ತಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಟಿ ಜೇಮ್ಸ್‌ಹೇಳಿದರು. ಇಲ್ಲಿನ ಅಂಕದಕಟ್ಟೆಯ ಕೆಎಸ್‌ಪಿ ಆವರಣದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಸೈನ್ ಇನ್ ಸೆಕ್ಯುರಿಟಿ […]