18 ವರ್ಷ ಮೇಲ್ಪಟ್ಟ ಬೂಸ್ಟರ್ ಡೋಸ್ ಅರ್ಹತೆಯುಳ್ಳವರಿಗೆ ಬಹು ಆಯ್ಕೆ ಲಭ್ಯ: ಕೋರ್ಬೆವಾಕ್ಸ್ ಪರಿಗಣಿಸಲು ಕೇಂದ್ರ ಮಾರ್ಗಸೂಚಿ

ನವದೆಹಲಿ: 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ಜನರಿಗೆ ಕೋರ್ಬೆವಾಕ್ಸ್ ನೊಂದಿಗೆ ಮುನ್ನೆಚ್ಚರಿಕಾ(ಬೂಸ್ಟರ್) ಡೋಸ್ ನ ಭಿನ್ನ ಆಯ್ಕೆಯು ಲಭ್ಯವಿರುತ್ತದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಮಾತನಾಡಿ, 18 ವರ್ಷ ಮೇಲ್ಪಟ್ಟ ಜನರಿಗೆ ಕೋವಾಕ್ಸಿನ್ ಅಥವಾ ಕೋವಿಶೀಲ್ಡ್ ಲಸಿಕೆಗಳ ಎರಡನೇ ಡೋಸ್ ನೀಡಿದ ದಿನಾಂಕದಿಂದ ಆರು ತಿಂಗಳ ನಂತರ ಮುನ್ನೆಚ್ಚರಿಕಾ ಡೋಸ್ ಆಗಿ ಕೋರ್ಬೆವಾಕ್ಸ್ ಲಭ್ಯವಿರುತ್ತದೆ ಎಂದು ಹೇಳಿದ್ದಾರೆ. ಅಂದರೆ, ಈ ಹಿಂದೆ ಕೋವಾಕ್ಸಿನ್ ಅಥವಾ ಕೋವಿಶೀಲ್ಡ್ ನ ಎರಡೂ ಡೋಸೇಜ್ […]

ಯುರೋಪ್ ಅಮೇರಿಕಾಗಳಲ್ಲಿ ಹೆಚ್ಚುತ್ತಿರುವ ಮಂಕಿ ಪಾಕ್ಸ್ ಪ್ರಕರಣ: ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಿ ಎಂದ ಕೇಂದ್ರ ಸರ್ಕಾರ

ಹೊಸದಿಲ್ಲಿ: ಬೆಲ್ಜಿಯಂ, ಫ್ರಾನ್ಸ್, ಜರ್ಮನಿ, ಇಟಲಿ, ನೆದರ್‌ಲ್ಯಾಂಡ್ಸ್, ಪೋರ್ಚುಗಲ್, ಸ್ಪೇನ್, ಸ್ವೀಡನ್, ಯುನೈಟೆಡ್ ಸ್ಟೇಟ್ಸ್, ಕೆನಡಾ, ಆಸ್ಟ್ರೇಲಿಯಾ ಮತ್ತು ಯುನೈಟೆಡ್ ಕಿಂಗ್‌ಡಮ್ ಸೇರಿದಂತೆ ಹಲವಾರು ದೇಶಗಳಲ್ಲಿ ಮಂಗನ ಸಿಡುಬು ಕಾಯಿಲೆಯ ಪ್ರಕರಣಗಳು ಹೆಚ್ಚು ವರದಿಯಾಗುತ್ತಿದೆ. ಕೋವಿಡ್-19 ರ ಸಂಕಟ ಇನ್ನೂ ಮುಗಿದಿಲ್ಲದಿರುವ ಈ ವೇಳೆಯಲ್ಲಿ ಜಗತ್ತು ಮತ್ತೊಂದು ಸಾಂಕ್ರಾಮಿಕಕ್ಕೆ ಬಲಿಯಾಗುತ್ತಿದೆಯೆ ಎನ್ನುವ ಅನುಮಾನ ಹಲವರನ್ನು ಕಾಡುತ್ತಿದೆ. ಈ ಮಧ್ಯೆ ಈ ಪ್ರಕರಣಗಳನ್ನು ಸೂಕ್ಷ್ಮವಾಗಿ ಗಮನಿಸಿ, ಮಂಕಿಪಾಕ್ಸ್ ಪೀಡಿತ ದೇಶಗಳಿಗೆ ಪ್ರಯಾಣದ ಇತಿಹಾಸ ಹೊಂದಿರುವ ಯಾವುದೇ ಅಸ್ವಸ್ಥ ಪ್ರಯಾಣಿಕರನ್ನು […]