ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ರಾಜಾತಿಥ್ಯ: ಕಾರಾಗೃಹ ಸಿಬ್ಬಂದಿಯ ನೌಕರಿಗೆ ಕುತ್ತು
ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ರಾಜಾತಿಥ್ಯ ದೊರೆಯುತ್ತಿರುವ ಬಗ್ಗೆ ವರದಿ ಬಂದ ಮೇಲೆ ರಾಜ್ಯಾದ್ಯಂತ ಈ ಬಗ್ಗೆ ಆಕ್ರೋಶ ವ್ಯಕ್ತವಾದ ಬಳಿಕ ಎಚ್ಚೆತ್ತ ಸರಕಾರ ಇನ್ನು ಮುಂದೆ ಕೈದಿಗಳಿಗೆ ಡ್ರಗ್ಸ್, ಮದ್ಯ, ಮೊಬೈಲ್ ಮುಂತಾದ ವಸ್ತುಗಳನ್ನು ಪೂರೈಸುವ ಕಾರಾಗೃಹ ಸಿಬ್ಬಂದಿಗಳನ್ನು ಸೇವೆಯಿಂದಲೇ ವಜಾ ಮಾಡಲು ಮುಂದಾಗಿದೆ. ಕಾರಾಗೃಹದ ನೂತನ ಮುಖ್ಯ ಅಧೀಕ್ಷಕ ಪಿ.ಎಸ್.ರಮೇಶ್ ಇನ್ನು ಮುಂದೆ ಜೈಲಿನ ಅಕ್ರಮ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಅಮಾನತು ಮಾಡದೆ, ನೇರವಾಗಿ ಸೇವೆಯಿಂದಲೇ ವಜಾಗೊಳಿಸುವ ಎಚ್ಚರಿಕೆ ನೀಡಿದ್ದಾರೆ. ಕೆಲ […]