ಅಮ್ಮನಿಗಾಗಿ ಒಂದು ಪುಸ್ತಕ ಮತ್ತು ಪತ್ರ ಬರೆಯುವ ಅಭಿಯಾನ ಕಾರ್ಯಕ್ರಮ

ಉಡುಪಿ: ನಗರ ಕೇಂದ್ರ ಗ್ರಂಥಾಲಯ ಉಡುಪಿ ಇವರ ವತಿಯಿಂದ ಅಜ್ಜರಕಾಡು ವಿದ್ಯಾವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯರ ಸ್ಮಾರಕ ನಗರ ಕೇಂದ್ರ ಗ್ರಂಥಾಲಯದ ಮಕ್ಕಳ ಸಮುದಾಯ ಕೇಂದ್ರದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ಮಕ್ಕಳಿಗೆ ಅಮ್ಮನಿಗಾಗಿ ಒಂದು ಪುಸ್ತಕ ಮತ್ತು ಪತ್ರ ಬರೆಯುವ ಅಭಿಯಾನ ಕಾರ್ಯಕ್ರಮವು ಬುಧವಾರ ನಡೆಯಿತು. ಸಾಹಿತಿ ಹಾಗೂ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಸದಸ್ಯೆ ವಸಂತಿ ಶೆಟ್ಟಿ ಬ್ರಹ್ಮಾವರ ಕಾರ್ಯಕ್ರಮ ಉದ್ಘಾಟಿಸಿ, ಗ್ರಂಥಾಲಯಗಳ ಮೂಲಕ ಮಕ್ಕಳು ನಿರಂತರವಾಗಿ ಅನೇಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಸಾಧ್ಯ. ಪೋಷಕರು ಗ್ರಂಥಾಲಯದಲ್ಲಿನ […]