ಕರಾವಳಿ ಪ್ರದೇಶದ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಮನವಿಗೆ ಸ್ಪಂದಿಸಿದ ಕೇಂದ್ರ ಸರಕಾರ: ಶೋಭಾ ಕರಂದ್ಲಾಜೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸಾಂಪ್ರದಾಯಿಕವಾಗಿ ನಡೆಸಿಕೊಂಡು ಬರುತ್ತಿರುವ ನಾಡದೋಣಿ ಮೀನುಗಾರಿಕೆಗೆ ಹಂಚಿಕೆಯಾಗಿದ್ದ ಸೀಮೆಎಣ್ಣೆ ಸಕಾಲದಲ್ಲಿ ಸಿಗುತ್ತಿಲ್ಲ, ಈ ಕುರಿತು ಕೇಂದ್ರ ಸರಕಾರದ ಗಮನವನ್ನು ಸೆಳೆದು ಹಂಚಿಕೆಯಾಗಿರುವ ಸೀಮೆ ಎಣ್ಣೆಯನ್ನು ತ್ವರಿತವಾಗಿ ಬಿಡುಗಡೆಗೊಳಿಸಬೇಕು, ಈ ಮೂಲಕ ಕರಾವಳಿಯ ಮೀನುಗಾರರ ಹಿತವನ್ನು ಕಾಯಬೇಕು ಎಂದು ಉಡುಪಿಯ ಮೀನುಗಾರರ ಒಕ್ಕೂಟ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ, ಶೋಭಾ ಕರಂದ್ಲಾಜೆಯವರಿಗೆ ಮನವಿಯನ್ನು ಸಲ್ಲಿಸಿತ್ತು. ರಾಜ್ಯದಲ್ಲಿ 10,100 ಕ್ಕೂ ಅಧಿಕ ನಾಡದೋಣಿಗಲಿದ್ದು, 60,000 ಕ್ಕಿಂತಲೂ ಹೆಚ್ಚಿನ ಮೀನುಗಾರರ ಜೀವನಾಧಾರವಾಗಿದೆ. ಕೇಂದ್ರ […]