ಗ್ರಾಮಪಂಚಾಯತ್ ತೆರಿಗೆ ಪಾವತಿಗೆ ಡಿಜಿಟಲ್ ವ್ಯವಸ್ಥೆ ಕಡ್ಡಾಯ: ಪ್ರಸನ್ನ ಹೆಚ್
ಉಡುಪಿ: ಸಾರ್ವಜನಿಕರು ಗ್ರಾಮ ಪಂಚಾಯತ್‌ಗಳಿಗೆ ವಿವಿಧ ತೆರಿಗೆ, ಶುಲ್ಕ ಸೇರಿದಂತೆ ಮತ್ತಿತರ ದರಗಳನ್ನು ಶನಿವಾರದಿಂದ ಕಡ್ಡಾಯವಾಗಿ ಡಿಜಿಟಲ್ ವ್ಯವಸ್ಥೆಯ ಮೂಲಕ ಪಾವತಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ತಿಳಿಸಿದರು. ಅವರು ಉಡುಪಿ ತಾಲೂಕಿನ ಕಲ್ಯಾಣಪುರ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಪಂಚಾಯತ್‌ಗಳಲ್ಲಿ ನಗದು ರಹಿತ ವ್ಯವಹಾರಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು. ಜನ ಸಾಮಾನ್ಯರು ವಿವಿಧ ತೆರಿಗೆಗಳು, ಶುಲ್ಕಗಳು, ದರಗಳನ್ನು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳಿಗೆ ನಗದು ರಹಿತವಾಗಿ ಪಾವತಿಸುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಸಾರ್ವಜನಿಕರು ನಗದು […]
ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಆಯೋಜನೆ
ಉಡುಪಿ: ಶ್ರೇಷ್ಠವಾದ ರಕ್ತದಾನದಿಂದ ಆಪತ್ತಿನಲ್ಲಿರುವವರ ಜೀವ ರಕ್ಷಣೆ ಮಾಡಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ. ಹೆಚ್ ಹೇಳಿದರು. ಅವರು ಇಂದು ಚಿಟ್ಪಾಡಿಯ ಸೈಂಟ್ ಮೇರಿಸ್ ಖಾಸಗಿ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಯ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ(ರಿ.), ಅಪ್ಪು ಅಭಿಮಾನಿಗಳ ಬಳಗ, ರಕ್ತನಿಧಿ ಕೇಂದ್ರ, ಜಿಲ್ಲಾ ಆಸ್ಪತ್ರೆ, ಲಯನ್ಸ್ […]
ಜಿಪಂ ಸಿಇಒ ಡಾ. ನವೀನ್ ಭಟ್ ವರ್ಗಾವಣೆ
ಉಡುಪಿ: ಉಡುಪಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ಅವರನ್ನು ರಾಜ್ಯ ರಸ್ತೆ ಸಾರಿಗೆ ನಿಗಮದ ನಿರ್ದೇಶಕರನ್ನಾಗಿ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ. ಕರ್ನಾಟಕ ಭವನ ನವದೆಹಲಿ ಇದರ ಸಹಾಯಕ ಕಮೀಷನರ್ ಆಗಿದ್ದ ಪ್ರಸನ್ನ ಎಚ್. ಅವರನ್ನು ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯನ್ನಾಗಿ ನೇಮಕಗೊಳಿಸಲಾಗಿದೆ.
ಮಲೇರಿಯಾ ನಿಯಂತ್ರಣಕ್ಕೆ ಜನರ ಸಹಭಾಗಿತ್ವ ಅಗತ್ಯ: ಸಿಂಧೂ ರೂಪೇಶ್
ಉಡುಪಿ, ಜೂನ್ 27: ಉಡುಪಿ ಜಿಲ್ಲೆಯಲ್ಲಿ ಇದೀಗ ಮಲೇರಿಯಾವು ನಿಯಂತ್ರಣದಲ್ಲಿದ್ದು, ಮಲೇರಿಯಾ ನಿರ್ಮೂಲನೆ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜನರ ಸಹಕಾರ ಅಗತ್ಯ ಎಂದು ಜಿಲ್ಲಾ ಪಂಚಾಯತ್‍ನ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಸಿಂಧೂ ರೂಪೇಶ್ ಹೇಳಿದ್ದಾರೆ. ಅವರು ಗುರುವಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಚೇರಿ ಹಾಗೂ ಉಡುಪಿ ನಗರಸಭೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ, ಮಲೇರಿಯಾ ವಿರೋಧಿ ಮಾಸಾಚರಣೆ ಪ್ರಯುಕ್ತ , ಬೋರ್ಡ್ ಹೈಸ್ಕೂಲ್ ಆರವಣದಲ್ಲಿ ಏರ್ಪಡಿಸಿದ್ದ […]
ಸಾರ್ವಜನಿಕರಿಗೆ ಸರಿಯಾಗಿ ಲಭಿಸದ ಆಧಾರ್; ಜಿ.ಪಂ. ಸಾಮಾನ್ಯ ಸಭೆಯಲ್ಲಿ ಸದಸ್ಯರ ಆಕ್ರೋಶ
ಉಡುಪಿ, ಜೂ.25: ಆಧಾರ್ ಕಾರ್ಡ್ ಸೇವೆ ಸಾರ್ವಜನಿಕರಿಗೆ ಸರಿಯಾಗಿ ಸಿಗದೇ ತೀವ್ರ ಸಮಸ್ಯೆ ಉಂಟಾಗಿದೆ ಎಂದು ಜಿ.ಪಂ. ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಜಿ.ಪಂ.ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಿ.ಪಂ ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆಯಲ್ಲಿ ನಡೆದ 16ನೇ ಜಿಲ್ಲಾ ಪಂ. ಸಾಮಾನ್ಯ ಸಭೆಯಲ್ಲಿ ಆಧಾರ್‌ಕಾರ್ಡ್ ಸಮಸ್ಯೆ ಕುರಿತು ಚರ್ಚೆ ನಡೆಯಿತು. ಜಿಲ್ಲೆಯ ಎಲ್ಲಾ ಗ್ರಾ.ಪಂ.ಗಳಲ್ಲಿ ಸಾಫ್ಟವೇರ್ ಸಮಸ್ಯೆ ಉಂಟಾಗಿದೆ ಎನ್ನುವ ಕಾರಣ ನೀಡಿದ್ದು, ಆಧಾರ್ ಸೇವೆ ಸ್ಥಗಿತಗೊಂಡಿದೆ. ತಾಲೂಕು ಕಚೇರಿ, ಅಂಚೆ ಕಚೇರಿಯಲ್ಲಿಯೂ ಸರಿಯಾದ ಸೇವೆ […]