ಸರ್ಟಿಫಿಕೇಟ್ ಇನ್ ಲೈಬ್ರರಿ ಸೈನ್ಸ್ ತರಬೇತಿ: ಅರ್ಜಿ ಆಹ್ವಾನ

ಉಡುಪಿ: ಸಾರ್ವಜನಿಕ ಗ್ರಂಥಾಲಯ ಇಲಾಖೆಯ ವತಿಯಿಂದ ಮಂಗಳೂರಿನ ನಗರ ಕೇಂದ್ರ ಗ್ರಂಥಾಲಯದಲ್ಲಿ ನಾಲ್ಕು ತಿಂಗಳ ಅವಧಿಯ ಸರ್ಟಿಫಿಕೇಟ್ ಇನ್ ಲೈಬ್ರರಿ ಸೈನ್ಸ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 40 ಅಂಕಗಳೊಂದಿಗೆ ತೇರ್ಗಡೆಯಾದ ಸಾಮಾನ್ಯ ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ಶೇ. 35 ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿಗಾಗಿ ಅರ್ಜಿ ಸಲ್ಲಿಸಲು ಇಚ್ಛಿಸುವ ಇಲಾಖೆಯ ಡಿ ದರ್ಜೆಯ ಗ್ರಂಥಾಲಯ ಸಹವರ್ತಿಗಳು ಹಾಗೂ ಗ್ರಾಮ ಪಂಚಾಯತಿ ಗ್ರಂಥಾಲಯಗಳ ಮೇಲ್ವಿಚಾರಕರು […]