ಬ್ರಹ್ಮಾವರ ಸರಕಾರಿ ಆಸ್ಪತ್ರೆಯಲ್ಲಿ ಸಿಸೇರಿಯನ್ ಸೌಲಭ್ಯ ಪ್ರಾರಂಭ
ಉಡುಪಿ, ಮೇ 10: ಇತ್ತೀಚಿಗೆ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಂಡು ಕಾರ್ಯ ನಿರ್ವಹಿಸುತ್ತಿರುವ ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೇ 9 ರಂದು ಪ್ರಥಮ ಸಿಸೇರಿಯನ್ ಶಸ್ತ್ರ ಚಿಕಿತ್ಸೆ ನಡೆಸಲಾಯಿತು. ಸಾಕಷ್ಟು ಜನೋಪಯೋಗಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರ ಬ್ರಹ್ಮಾವರದಲ್ಲಿ ಪ್ರಸೂತಿ ತಜ್ಞೆ ಡಾ. ದೀಕ್ಷಿತಾ ಹಾಗೂ ಅರವಳಿಕೆ ತಜ್ಞ ಡಾ. ಅಜಿತ್ ಕುಮಾರ್ ಶೆಟ್ಟಿ ಯಶಸ್ವಿಯಾಗಿ ಸಿಸೇರಿಯನ್ ಶಸ್ತ್ರ ಚಿಕಿತ್ಸೆ ನಡೆಸಿದರು. ಮಕ್ಕಳ ತಜ್ಞ ಡಾ. ಮಹಾಬಲ ಕೆ.ಎಸ್ ನವಜಾತ ಶಿಶುವಿನ ಯೋಗ ಕ್ಷೇಮ ನೋಡಿಕೊಂಡರು. […]