ಅ. 9 ರಂದು ಗ್ರಾಮ ಪಂಚಾಯತ್ ಗಳಲ್ಲಿ ಸಾಮಾನ್ಯ ಜ್ಞಾನ ಪತ್ರಿಕೆಯ ಪ್ರಾಯೋಗಿಕ ತರಬೇತಿ
ಉಡುಪಿ: ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಸಭಾಂಗಣದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಆನ್‌ಲೈನ್ ತರಬೇತಿ ಆಯೋಜಿಸಲು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವ್ಯವಸ್ಥೆ ಮಾಡಿಕೊಂಡಿದ್ದು, ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವ ಸಾಮಾನ್ಯ ಜ್ಞಾನ ಪತ್ರಿಕೆಯ ಆನ್‌ಲೈನ್ ತರಬೇತಿಯನ್ನು ಪ್ರಾಯೋಗಿಕವಾಗಿ ಅಕ್ಟೋಬರ್ 9 ರಂದು ಸಂಜೆ 5.30 ಕ್ಕೆ ಆರಂಭಿಸಲಾಗುತ್ತಿದೆ. ಸ್ಪರ್ಧಾತ್ಮಕ ಪರೀಕ್ಷೆ ಬರೆಯಲಿಚ್ಚಿಸುವ ಅಭ್ಯರ್ಥಿಗಳು https://udupi-spardha.com ಮೂಲಕ ಆಥವಾ ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೆಸರು ನೊಂದಾಯಿಸಿಕೊಳ್ಳುವಂತೆ […]
CET-NEET 2023 ರ 2 ನೇ ಸುತ್ತಿನ ವೇಳಾಪಟ್ಟಿ ಬಿಡುಗಡೆ
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ, KEA ಕರ್ನಾಟಕ CET, NEET 2023 ರ 2 ನೇ ಸುತ್ತಿನ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರವೇಶಕ್ಕಾಗಿ 2 ನೇ ಸುತ್ತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು KEA ಯ ಅಧಿಕೃತ ಸೈಟ್ kea.kar.nic.in ನಲ್ಲಿ ವೇಳಾಪಟ್ಟಿಯನ್ನು ಪರಿಶೀಲಿಸಬಹುದು. ಅಧಿಕೃತ ವೇಳಾಪಟ್ಟಿಯ ಪ್ರಕಾರ, ಸೀಟ್ ಮ್ಯಾಟ್ರಿಕ್ಸ್‌ನ ಪ್ರದರ್ಶನವನ್ನು ಆಗಸ್ಟ್ 30, 2023 ರಂದು ಮಾಡಲಾಗುತ್ತದೆ. ಆಯ್ಕೆಗಳ ಮರುಜೋಡಣೆ-ಮಾರ್ಪಡಿಕೆ/ ಅಳಿಸುವಿಕೆ/ ಮರು-ಆರ್ಡರ್ ಆಯ್ಕೆಗಳು ಯಾವುದಾದರೂ ಇದ್ದರೆ ಅರ್ಹ ಅಭ್ಯರ್ಥಿಗಳು ಆಗಸ್ಟ್ 30 ರಿಂದ […]
ಸಿಇಟಿ ಪರೀಕ್ಷೆ ಆರಂಭ; ಜಿಲ್ಲೆಯಲ್ಲಿ ಸಕಲ ಸಿದ್ದತೆ ಪೂರ್ಣ: ಜಿ.ಪಂ ಸಿಇಒ
ಉಡುಪಿ: ರಾಜ್ಯದಾದ್ಯಂತ ಸಿಇಟಿ ಪರೀಕ್ಷೆಗಳು ಆರಂಭಗೊಳ್ಳಲಿದ್ದು ಮೇ 20 ಮತ್ತು 21 ರಂದು ನಡೆಯಲಿರುವ ಪರೀಕ್ಷೆಗಾಗಿ ಉಡುಪಿ ಜಿಲ್ಲೆಯಲ್ಲಿ ಸಕಲ ಸಿದ್ದತೆಗಳನ್ನು ಮಾಡಲಾಗಿದೆ. ಉಡುಪಿಯಲ್ಲಿ 6, ಕಾರ್ಕಳದಲ್ಲಿ 2, ಕುಂದಾಪುರದಲ್ಲಿ 2 ಹಾಗೂ ಬ್ರಹ್ಮಾವರದಲ್ಲಿ 2 ಸೇರಿದಂತೆ ಒಟ್ಟು 12 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಉಡುಪಿ ಜಿಲ್ಲೆಯಲ್ಲಿ ಒಟ್ಟು 5712 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಸಿಇಟಿ ಪರೀಕ್ಷೆ ಕುರಿತು ಪ್ರಶ್ನೆಪತ್ರಿಕೆಯನ್ನು ಜಿಲ್ಲಾ ಖಜಾನೆಯಲ್ಲಿ ಸೂಕ್ತ ಪೊಲೀಸ್ ಭದ್ರತೆಯಲ್ಲಿ ಇಡಲಾಗಿದೆ. ಖಜಾನೆಯಲ್ಲಿ ಸಿಸಿಟಿವಿ ವ್ಯವಸ್ಥೆ ಅಳವಡಿಸುವಂತೆ ಹಾಗೂ […]
ಏ. 3 ರಿಂದ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಸಿ.ಇ.ಟಿ, ನೀಟ್ ಹಾಗೂ ಜೆ.ಇ.ಇ ಕ್ರಾಶ್ ಕೋರ್ಸ್ ತರಬೇತಿ
ಉಡುಪಿ: ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಾಂಗ ಮಾಡುತ್ತಿರುವ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಸಿ.ಇ.ಟಿ, ನೀಟ್ ಹಾಗೂ ಜೆ.ಇ.ಇ ಕ್ರಾಶ್ ಕೋರ್ಸ್ ತರಬೇತಿಯು ಏಪ್ರಿಲ್ 3 ರಿಂದ ಈ ಕೆಳಕಂಡ ಕಾಲೇಜುಗಳಲ್ಲಿ ನಡೆಯಲಿದೆ. ಮಲ್ಪೆ ಸರಕಾರಿ ಪದವಿ ಪೂರ್ವ ಕಾಲೇಜು, ಉಡುಪಿಯ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಸರಕಾರಿ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತರಬೇತಿ ನಡೆಯಲಿದ್ದು, ನೋಡೆಲ್ ಅಧಿಕಾರಿಯಾಗಿ ಕಾಲೇಜಿನ […]
ಸಿಇಟಿ: ಮೊದಲ 50 ರಲ್ಲಿ 20 ರ‍್ಯಾಂಕ್ ಪಡೆದ ಮಂಗಳೂರಿನ ಎಕ್ಸ್ಪರ್ಟ್ ಪ.ಪೂ ಕಾಲೇಜು ವಿದ್ಯಾರ್ಥಿಗಳು
ಮಂಗಳೂರು: 2022ನೇ ಸಾಲಿನ ಸಿಇಟಿ ಪರೀಕ್ಷೆಯ ಐದು ವಿಭಾಗದ ಮೊದಲ 10 ರ‍್ಯಾಂಕ್‌ಗಳಲ್ಲಿ 2 ರ‍್ಯಾಂಕ್‌ಗಳನ್ನು ಮಂಗಳೂರಿನ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ. ಮೊದಲ 50 ರ‍್ಯಾಂಕ್‌ನಲ್ಲಿ 20 ರ‍್ಯಾಂಕ್ ಹಾಗೂ ಮೊದಲ 100 ರ‍್ಯಾಂಕ್‌ನಲ್ಲಿ 49 ರ‍್ಯಾಂಕ್‌ಗಳನ್ನು ಎಕ್ಸ್ಪರ್ಟ್ ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ. ಮೊದಲ 150 ರಲ್ಲಿ 78 ರ‍್ಯಾಂಕ್, ಮೊದಲ 200 ರ‍್ಯಾಂಕ್‌ಗಳಲ್ಲಿ 105, ಮೊದಲ 300 ರ‍್ಯಾಂಕ್‌ಗಳಲ್ಲಿ 153 ರ‍್ಯಾಂಕ್‌ಗಳನ್ನು ಸಂಸ್ಥೆಯ ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ. ಕಾಲೇಜಿನ ಆದಿತ್ಯಾ ಕಾಮತ್ ಅಮ್ಮೆಂಬಳ ಬಿಎನ್‌ವೈಎಸ್‌ನಲ್ಲಿ […]