ಹುಟ್ಟೂರು ಕಾಣುವ ಆಸೆಯಿಂದ ಹೊರಟ ಯುವಕ ದಾರಿ ಮಧ್ಯೆ ಸಾವು

ಕುಂದಾಪುರ: ಬೆಂಗಳೂರಿನಿಂದ ಕುಂದಾಪುರಕ್ಕೆ ಖಾಸಗಿ ಬಸ್ ವೊಂದರಲ್ಲಿ ಪ್ರಯಾಣ ಬೆಳೆಸಿದ್ದ ಸಾಫ್ಟ್ವೇರ್ ಉದ್ಯೋಗಿಯೋರ್ವ ಬಸ್ ನಲ್ಲೇ ಅಸ್ವಸ್ಥಗೊಂಡು ಸಾವನ್ನಪ್ಪಿದ ದಾರುಣ ಘಟನೆ ಕುಂದಾಪುರದಲ್ಲಿ ಮಂಗಳವಾರ ಮುಂಜಾನೆ ನಡೆದಿದೆ. ಸಾವನ್ನಪ್ಪಿದ ಯುವಕ ಕೋಟೇಶ್ವರ ಕುಂಬ್ರಿ ನಿವಾಸಿ ವಿಷ್ಣುಮೂರ್ತಿ ಆಚಾರಿಯವರ ಪುತ್ರ ಚೈತನ್ಯ (25) ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲೇ ಇಂಜಿನಿಯರ್ ಶಿಕ್ಷಣ ಪಡೆದ ಚೈತನ್ಯ ಕಳೆದ ಎರಡು ವರ್ಷಗಳಿಂದ ಬೆಂಗಳೂರಿನ ಮಾರತಹಳ್ಳಿಯಲ್ಲಿ ಸಾಫ್ಟ್ವೇರ್ ಉದ್ಯೋಗಿಯಾಗಿ ದುಡಿಯುತ್ತಿದ್ದರು. ಕೆಲಸ‌ ಕಡಿಮೆ ಇರುವ‌ ಕಾರಣ ಹೇಳಿ ಮನೆಗೆ ಬರುವುದಾಗಿ ತಿಳಿಸಿದ್ದ ಚೈತನ್ಯ ಆನ್ಲೈನ್ನಲ್ಲಿ […]