ಪಾರ್ಟಿ ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂಪಾಯಿ ಪಂಗನಾಮ ಹಾಕಿದ ಆರೋಪ: ವಾಗ್ಮಿ ಚೈತ್ರಾ ಕುಂದಾಪುರ ಸಿಸಿಬಿ ಪೊಲೀಸ್ ವಶಕ್ಕೆ
ಉಡುಪಿ: ಹಿಂದೂ ಸಂಘಟನೆಯ ಪ್ರಖರ ವಾಗ್ಮಿ ಚೈತ್ರಾ ಕುಂದಾಪುರ ಇವರನ್ನು ಸಿಸಿಬಿ ಬೆಂಗಳೂರು ವಿಭಾಗದ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ ಕಳೆದ ಕೆಲ ಸಮಯದಿಂದ ತಲೆಮರೆಸಿಕೊಂಡಿದ್ದ ಚೈತ್ರ ಕುಂದಾಪುರ ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿದ್ದಾಗ ಬೆಂಗಳೂರಿನ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಬೈಂದೂರಿನ ಬಿಜೆಪಿ ಮುಖಂಡ ಹಾಗೂ ಸಮಾಜ ಸೇವಕರೊಬ್ಬರಿಗೆ ವಿಧಾನಸಭಾ ಚುನಾವಣೆಗಾಗಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಸಂಗಡಿಗರೊಂದಿಗೆ ಸೇರಿಕೊಂಡು ಸುಮಾರು ಏಳು ಕೋಟಿ […]