ರಾಜ್ಯ ಸರಕಾರದ ಜನವಿರೋಧಿ ನೀತಿ ಬಿಡದಿದ್ದರೆ ನಿತ್ಯ ಹೋರಾಟಕ್ಕೂ ಸಿದ್ದ: ಕಾಪು ಬಿಜೆಪಿ

ಕಾಪು: ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರದ ವತಿಯಿಂದ ಕಾಪು ಪೇಟೆಯಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನಾ ಸಭೆ ನಡೆಯಿತು. ಪ್ರತಿಭಟನಾ ಸಭೆ ಉದ್ದೇಶಿಸಿ ಮಾತನಾಡಿದ ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ ನಾಯಕ್, ರಾಜ್ಯ ಸರಕಾರ ಎಲ್ಲರಿಗೂ 200 ಯುನಿಟ್ ವಿದ್ಯುತ್ ಉಚಿತ ಎಂದು ಹೇಳಿ ಇದೀಗ ವಾರ್ಷಿಕ ಸರಾಸರಿಯ ಶೇ.10 ರಷ್ಟು ಮಾತ್ರ ಉಚಿತ ಎನ್ನುತ್ತಾ ಜನರಿಗೆ ಕೊಟ್ಟ ವಚನ ಮುರಿದು ವಚನಭ್ರಷ್ಟವಾಗಿದೆ. ಅಲ್ಲದೆ ಪ್ರತಿ ಯುನಿಟ್ ವಿದ್ಯುತ್ ಗೆ ಸುಮಾರು […]