ಜಗತ್ಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಂಭ್ರಮದ ಚಂಪಾ ಷಷ್ಠಿ ಮಹೋತ್ಸವ
ಮಂಗಳೂರು: ಐತಿಹಾಸಿಕ ಮಾನ್ಯತೆಯಿರುವ ಕಾರ್ನಿಕದ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಮಹೋತ್ಸವವು ಸಂಭ್ರಮ-ಸಡಗರದಿಂದ ಜರುಗಿತು. ಮಂಗಳವಾರದಂದು ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಅದ್ಧೂರಿಯಾಗಿ ನೆರವೇರಿತು. ಕುಕ್ಕೆ ಸುಬ್ರಹ್ಮಣ್ಯ ದೇವರು ರಥದಲ್ಲಿ ಕುಳಿತು ರಥಬೀದಿಯಲ್ಲಿ ಸಂಚರಿಸಿ ಭಕ್ತರಿಗೆ ದರ್ಶನವನ್ನಿತ್ತರು.ವೃಶ್ಚಿಕ ಲಗ್ನದಲ್ಲಿ ದೇವರ ವಿಗ್ರಹಗಳ ಬ್ರಹ್ಮರಥಾರೋಹಣ ನಡೆಯಿತು. ಉಮಾಮಹೇಶ್ವರ ರಥೋತ್ಸವದ ಬಳಿಕ ಚಂಪಾಷಷ್ಠಿ ಮಹಾರಥೋತ್ಸವ ನಡೆಯಿತು. ಸೋಮವಾರ ರಾತ್ರಿ ಪಂಚಮಿ ರಥೋತ್ಸವ ನಡೆಯಿತು. ಸುಮಾರು 163 ಭಕ್ತರು ಎಡೆಸ್ನಾನ ಸೇವೆ ನೆರವೇರಿಸಿದರು. ಗೋವಿಗೆ ನೈವೇದ್ಯ ಅರ್ಪಿಸಿದ […]